ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಚಿ.ನಾ.ಹಳ್ಳಿ ತಾಲ್ಲೂಕ್ ಯೂತ್ ಕಾಂಗ್ರೆಸ್ ವತಿಯಿಂದ ಗುರುವಾರ ರಾಜೀವ್ ಗಾಂಧಿ ಅವರ ೨೪ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು.
ಈ ವೇಳೆ ತಾಲ್ಲೂಕು ಯೂತ್ ಕಾಂಗ್ರೆಸ್ ನ ಅಧ್ಯಕ್ಷ ಹೊಸಹಳ್ಳಿ ಅಶೋಕ್ ಮಾತನಾಡಿ , ಧೀಮಂತ ನಾಯಕರಾಗಿದ್ದ ರಾಜೀವ್ ಗಾಂಧಿ ಪ್ರಧಾನಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಜನಪರಯೋಜನೆಗಳನ್ನು ಜಾರಿಗೆ ತಂದು ಉತ್ತಮ ಆಡಳಿತನ ನಡೆಸಿದ್ದರು. ಆಡಳಿತದ ಜೊತೆಗೆ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಸಹ ಮಾಡಿದ್ದರು ಎಂದರು. ಅಂತೆಯೇ ಪ್ರಸ್ತುತದಲ್ಲಿ ರಾಹುಲ್ ಗಾಂಧಿಯವರು ಸಹ ಪಕ್ಷ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಪ್ರಧಾನಮಂತ್ರಿ ಹುದ್ದೆಗೇರಲಿ ಅದಕ್ಕೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೆಂಬಲವಿದೆ ಎಂದು ಆಶಿಸಿದರು.
ತಾಲ್ಲೂಕು ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಶ್ರೀಧರ್, ಚಿ.ನಾ.ಹಳ್ಳಿ ಪಿಎಲ್.ಡಿ ಬ್ಯಾಂಕ್ ನಿರ್ದೇಶಕ ಕೆಂಕೆರೆ ಶಿವಕುಮಾರ್, ಕಾಂಗ್ರೆಸ್ ಮುಖಂಡರಾದ ಪಟೇಲ್ ರಾಜ್ ಕುಮಾರ್, ಸೀಗೆಬಾಗಿ ಸಿದ್ರಾಮಣ್ಣ, ವೆಂಕಟೇಶ್, ಹಮೀದ್ ,ಕೆಂಕೆರೆ ಈಶ್ವರಯ್ಯ,ಈರುಳ್ಳಿ ಮಂಜು, ಪೋನ್ ರೇಣುಕಮೂರ್ತಿ,ಮೋಹನ್,ವಿನೋದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಈ ವೇಳೆ ತಾಲ್ಲೂಕು ಯೂತ್ ಕಾಂಗ್ರೆಸ್ ನ ಅಧ್ಯಕ್ಷ ಹೊಸಹಳ್ಳಿ ಅಶೋಕ್ ಮಾತನಾಡಿ , ಧೀಮಂತ ನಾಯಕರಾಗಿದ್ದ ರಾಜೀವ್ ಗಾಂಧಿ ಪ್ರಧಾನಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಜನಪರಯೋಜನೆಗಳನ್ನು ಜಾರಿಗೆ ತಂದು ಉತ್ತಮ ಆಡಳಿತನ ನಡೆಸಿದ್ದರು. ಆಡಳಿತದ ಜೊತೆಗೆ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಸಹ ಮಾಡಿದ್ದರು ಎಂದರು. ಅಂತೆಯೇ ಪ್ರಸ್ತುತದಲ್ಲಿ ರಾಹುಲ್ ಗಾಂಧಿಯವರು ಸಹ ಪಕ್ಷ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಪ್ರಧಾನಮಂತ್ರಿ ಹುದ್ದೆಗೇರಲಿ ಅದಕ್ಕೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೆಂಬಲವಿದೆ ಎಂದು ಆಶಿಸಿದರು.
![]() |
ಹುಳಿಯಾರಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಾಲ್ಲೂಕ್ ಯೂತ್ ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿ ಅವರ ೨೪ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು. |
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ