ವಿಷಯಕ್ಕೆ ಹೋಗಿ

ಇಂದು (ಜೂನ್ ೧೪) ವಿಶ್ವ ರಕ್ತದಾನಿಗಳ ದಿನ

ಇಂದು (ಜೂನ್ ೧೪) ವಿಶ್ವ ರಕ್ತದಾನಿಗಳ ದಿನ
--------------------------------------
ರಕ್ತದಾನ - ಮಹಾದಾನ
---------------------------
ಪ್ರತಿ ವರ್ಷದ ಜೂನ್ ೧೪ರಂದು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸುತ್ತಾರೆ. ನಿಮ್ಮ ಸುತ್ತ-ಮುತ್ತಲಲ್ಲೇ ಎಷ್ಟೊ ಜನಕ್ಕೆ ರಕ್ತದ ಅವಶ್ಯಕತೆ ಇರುತ್ತದೆ, ಹಾದಿ ಬೀದಿಯಲ್ಲಿ ದಿನಕ್ಕೊಬ್ಬರಾದರೂ ರಸ್ತೆ ಅಫಘಾತ, ಮತ್ಯಾವುದೋ ತೊಂದರೆಯಿಂದ ಬಳಲುತ್ತಾ ಇರುವವರಿಗೆ ರಕ್ತದ ಅವಶ್ಯಕತೆ ಇರುತ್ತದೆ, ರಕ್ತದ ಅವಶ್ಯಕತೆ ಇರುವವರಿಗೆ ನಮ್ಮಿಂದ -ನಿಮ್ಮಿಂದ ಸಹಾಯವಾದರೆ ಅದಕ್ಕೆ ಸಿಗುವ ತುಂಬು ಹೃದಯದ ಅಭಿನಂದನೆಯೇ ವರ್ಣಾತೀತ.


ನಿಮಗಿದು ತಿಳಿದಿರಲಿ
-----------------------
* ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ.
* ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ.
* ರಕ್ತವನ್ನು ಮನುಷ್ಯರ ದಾನದಿಂದ ಮಾತ್ರ ಪಡೆಯಬಹುದು.
* ರಕ್ತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿಯಾಗಿ 24 ಗಂಟೆಯ ಒಳಗಾಗಿ ದಾನ ಮಾಡಿದ ಪ್ರಮಾಣದ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ.
*ಒಂದೆರಡು ವಾರಗಳಲ್ಲಿ ರಕ್ತದ ಎಲ್ಲಾ ಅಂಶಗಳು ದಾನಿಯ ರಕ್ತದಲ್ಲಿ ಸಂಪೂರ್ಣವಾಗಿ ತುಂಬಿಕೊಳ್ಳುತ್ತದೆ.
* ರಕ್ತದಾನ ಮಾಡುವಾಗ ಒಂದು ಚುಚ್ಚು ಮದ್ದು ತೆಗೆದು ಕೊಂಡಷ್ಟೇ ನೋವಾಗುತ್ತದೆ.
* ರಕ್ತದಾನ ಮಾಡಲು ಮತ್ತು ಸುಧಾರಿಸಿಕೊಳ್ಳಲು ಕೇವಲ 20 ನಿಮಿಷ ಮಾತ್ರ ಸಾಕು. * ರಕ್ತದಾನ ಮಾಡುವಾಗ ಒಮ್ಮೆಗೆ 350ಎಂ. ಎಲ್. ರಕ್ತ ಮಾತ್ರ ತೆಗೆಯಲಾಗುವುದು. ಸಾಮಾನ್ಯವಾಗಿ ಮನುಷ್ಯನ ದೇಹದಲ್ಲಿ 5ರಿಂದ 6 ಲೀಟರ್ ರಕ್ತ ಇರುತ್ತದೆ. * ರಕ್ತದಾನ ಮಹಾದಾನ, ಇದಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ.

ಯಾರು ರಕ್ತದಾನ ಮಾಡಬಹುದು?
-----------------------
*ಹೆಣ್ಣು ಗಂಡೆಂಬ ಭೇದವಿಲ್ಲದೆ 18ರಿಂದ 60ವರ್ಷದ ಒಳಗಿರುವ ಎಲ್ಲಾ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು.
* ಗಂಡಸರು 3 ತಿಂಗಳಿಗೊಮ್ಮೆ ಮತ್ತು ಹೆಂಗಸರು 6 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
* ರಕ್ತದಾನಿಯ ತೂಕ ಕನಿಷ್ಠ 45 ಕೆ.ಜಿ.ಗಿಂತ ಜಾಸ್ತಿ ಇರಬೇಕು.
* ರಕ್ತದಾನಿಯ ರಕ್ತದಲ್ಲಿ ಹಿಮೋಗ್ಲೊಬಿನ್ ಅಂಶ 12.5 ಗ್ರಾಂಗಿಂತ ಹೆಚ್ಚಿರಬೇಕು.

ಯಾರು ರಕ್ತದಾನ ಮಾಡಬಾರದು? -
--------------------------------
* ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುವವರು ರಕ್ತದಾನ ಮಾಡಬಾರದು.
* ಮದ್ಯಪಾನ ಮತ್ತು ಮಾದಕ ದ್ರವ್ಯ ಸೇವನೆ ಮಾಡಿದಾಗ ರಕ್ತದಾನ ಮಾಡಬಾರದು.
* ಮಹಿಳೆಯರು ತಿಂಗಳ ಮುಟ್ಟಿನ ಸಮಯದಲ್ಲಿ, ಗರ್ಭಿಣಿಯರಾಗಿದ್ದಾಗ, ಎದೆಹಾಲು ಉಣಿಸುತ್ತಿರುವಾಗ ಮತ್ತು ಹೆರಿಗೆಯ ನಂತರ 6 ತಿಂಗಳು ರಕ್ತದಾನ ಮಾಡಬಾರದು.
* ಯಾವುದೇ ವ್ಯಕ್ತಿ ಕಾಯಿಲೆಯ ವಿರುದ್ಧ ಲಸಿಕೆ ಪಡೆದಿದ್ದರೆ ಅಂತಹವರು ಲಸಿಕೆ ಪಡೆದ 4 ವಾರಗಳ ವರೆಗೆ ರಕ್ತದಾನ ಮಾಡಬಾರದು.
* ಮಲೇರಿಯಾ ರೋಗಕ್ಕೆ ಚಿಕಿತ್ಸೆ ಪಡೆದಿದ್ದರೆ ಚಿಕಿತ್ಸೆ ಪಡೆದ ನಂತರ 3 ತಿಂಗಳು ರಕ್ತದಾನ ಮಾಡಬಾರದು * ಹಿಂದಿನ 3 ತಿಂಗಳಲ್ಲಿ ತಾವೇ ಯಾವುದೇ ರಕ್ತ ಅಥವಾ ರಕ್ತದ ಅಂಶ ಪಡೆದಿದ್ದರೆ ಅಂತಹವರು ರಕ್ತದಾನ ಮಾಡಬಾರದು.
*ಕಾಮಾಲೆ, ಎಚ್.ಐ.ವಿ. ಮತ್ತು ಸಿಫಿಲಿಸ್ ಹಾಗೂ ಇನ್ನಿತರ ಯಾವುದೇ ಲೈಗಿಂಕ ರೋಗವಿರುವವರು ರಕ್ತದಾನ ಮಾಡಬಾರದು.
* ಯಾವುದೇ ದೊಡ್ಡ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೆ ಅಂತಹವರು ಮುಂದಿನ 6 ತಿಂಗಳವರೆಗೆ ಮಾತ್ರ ಚಿಕ್ಕ ಪ್ರಮಾಣದ ಶಸ್ತ್ರ ಚಿಕಿತ್ಸೆಗೆ ಒಳಗಾದವರು ಮುಂದಿನ 3 ತಿಂಗಳವರೆಗೆ ರಕ್ತದಾನ ಮಾಡಬಾರದು.
* ಅರ್ಬುದ ರೋಗ. ಹೃದಯ ಸಂಬಂಧಿ ಕಾಯಿಲೆ, ಅಸಹಜ ರಕ್ತಸ್ರಾವ, ಅನಿಯಂತ್ರಿತ ಮಧುಮೇಹ ರೋಗ, ಮೂತ್ರಪಿಂಡದ ಕಾಯಿಲೆ ಮತ್ತು ಯಕೃತ ಸಂಬಂಧಿಸಿದ ಕಾಯಿಲೆ ಇರುವವರು ಹೆಪಟೈಟಿಸ್, ಬಿ ಮತ್ತು ಸಿ ಕಾಯಿಲೆಯಿರುವವರು ರಕ್ತದಾನ ಮಾಡಬಾರದು.


ಪರೀಕ್ಷೆಗೆ ಒಳಪಡದ ರಕ್ತದ ಮೂಲಕ ಹರಡಬಹುದಾದ ರೋಗಗಳು
----------------------------------------------------
*ಮಲೇರಿಯಾ ಲೈಂಗಿಕ ಸಂಪರ್ಕದ ರೋಗಗಳು-ಸಿಫಿಲಿಸ್ ಇತ್ಯಾದಿ
*ಹೆಪಟೈಟಿಸ್ ಬಿ ಮತ್ತು ಸಿ ಸೋಂಕಿನಿಂದುಂಟಾಗುವ ಕಾಯಿಲೆ ರೋಗ.
* ಎಚ್.ಐ.ವಿ. ಸೋಂಕು ಮತ್ತು ಏಡ್ಸ್ ರೋಗ

ರಕ್ತವನ್ನು ಯಾವುದೇ ವ್ಯಕ್ತಿಗೆ ನೀಡುವ ಮೊದಲು ರಕ್ತ ಮೇಲಿನ ಎಲ್ಲಾ ರೋಗಗಳಿಂದ ಮುಕ್ತವಾಗಿದೆ ಎಂದು ತಿಳಿಯಲು ಅಗತ್ಯವಾದ ಎಲ್ಲಾ ರೀತಿಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ಕಾರಣಕ್ಕಾಗಿಯೇ ಬದಲಿ ರಕ್ತ ನೀಡಿದರೂ ಒಂದು ಬಾಟಲ್ (350ಎಂ.ಎಲ್) ರಕ್ತಕ್ಕೆ ಕನಿಷ್ಠ 300ರಿಂದ 400ರೂ. ವೆಚ್ಚ ತಗಲುತ್ತದೆ.

ರಕ್ತದಾನ ಮಾಡುವುದರಿಂದ ದಾನಿಗಳಿಗೆ ಆಗುವ ಪ್ರಯೋಜನಗಳು
-------------------------------------------------------
*ರಕ್ತದಾನ ಮಾಡುವುದರಿಂದ ದಾನಿಯ ರಕ್ತದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಸಿಗುತ್ತದೆ. *ದೇಹದಲ್ಲಿ ಹೊಸ ರಕ್ತ ಚಾಲನೆಯಿಂದ ಕಾರ್ಯ ತತ್ಪರತೆ, ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ. *ದೇಹದಲ್ಲಿ ಕೊಬ್ಬಿನಂಶ (ಕೊಲೆಸ್ಟ್ರೊಲ್) ಕಡಿಮೆ ಮಾಡಲು ಸಹಾಯವಾಗುತ್ತದೆ.
*ಹೃದಯಾಘಾತವನ್ನು ಶೇಕಡಾ 80ಕ್ಕಿಂತ ಜಾಸ್ತಿ ತಡೆಯಲು ಸಹಾಯವಾಗುತ್ತದೆ.
*ರಕ್ತದ ಒತ್ತಡ ಹಾಗೂ ಇತರ ಕೆಲವು ಹೃದಯ ಸಂಬಂಧಿ ರೋಗಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ.
ಎಲ್ಲಕ್ಕಿಂತ ಮಿಗಿಲಾಗಿ ಒಂದು ಜೀವ ಉಳಿಸಿದಂತಾಗುತ್ತದೆ.

ನೆನಪಿರಲಿ....


ರಕ್ತದಾನ ಮಹಾದಾನ. ರಕ್ತದಾನಕ್ಕಿಂತ ಮಿಗಿಲಾದ ದಾನ ಬೇರೊಂದಿಲ್ಲ. ರಕ್ತದಾನ ಮಾಡಿ ಜೀವದಾನ ನೀಡಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.