ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯ್ತಿಯ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯಳನಾಡು ಕ್ಷೇತ್ರದ ಸದಸ್ಯೆ ಜಯಲಕ್ಷ್ಮಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾದರು.
ಹಾಲಿ ಅಧ್ಯಕ್ಷೆಯಾಗಿದ್ದ ಲತಾ ಅವರು ಬಿಜೆಪಿ ಅಧಿಕಾರ ಹಂಚಿಕೆ ಸೂತ್ರದನ್ವಯ ರಾಜಿನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಮೊದಲಿಗೆ ಆಗಿದ್ದ ಒಪ್ಪಂದದನ್ವಯ ಮೊದಲ ಅವಧಿಗೆ ಅಧ್ಯಕ್ಷರಾಗಿ ತಮ್ಮ ಅವಧಿ ಮುಗಿದ ನಂತರ ಲತಾ ರಾಜಿನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಯಲಕ್ಷ್ಮಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮತಿಘಟ್ಟ ಕ್ಷೇತ್ರದ ಸದಸ್ಯ ಎ. ನಿರಂಜನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಸುವ ಅವಧಿ ಮುಗಿದರೂ, ಯಾರೂ ನಾಮಪತ್ರ ಸಲ್ಲಿಸದ ಕಾರಣ, ಜಯಲಕ್ಷ್ಮಿ ಅವಿರೋ‘ವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಉಪವಿಭಾಗಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಘೋಷಿಸಿದರು. ಚುನಾವಣಾ ಪ್ರಕ್ರಿಯೆ ಸಂದರ್ಭದಲ್ಲಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಎಚ್.ಎನ್. ಕೃಷ್ಣಮೂರ್ತಿ, ಮಾಜಿ ಅಧ್ಯಕ್ಷರಾದ ಎಂ. ಎಂಜಗದೀಶ್, ಕೆಂಕೆರೆ ನವೀನ್, ಸೀತಾರಾಮಯ್ಯ, ಸದಸ್ಯರಾದ ಜಯಣ್ಣ, ಆರ್.ಪಿ. ವಸಂತ್, ಲತಾ ವಿಶ್ವೇಶ್ವರಯ್ಯ ಮುಂತಾದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ