ಶೈಕ್ಷಣಿಕ ಹಂತದಲ್ಲಿ ಇಂದಿನ ಮಕ್ಕಳಿಗೆ ಕಾನೂನು ಅರಿವು ಮೂಡಿಸುವುದು ಅಗತ್ಯ ಎಂದು ಚಿಕ್ಕನಾಯಕನಹಳ್ಳಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ್ ನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು.
ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಮಕ್ಕಳಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು. |
ಜಿಲ್ಲಾಕಾನೂನು ಸೇವಾಪ್ರಾಧಿಕಾರ, ತುಮಕೂರು ತಾಲ್ಲೂಕು ಕಾನೂನು ಸೇವಾ ಸಮಿತಿ, ಚಿ.ನಾ.ಹಳ್ಳಿ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಪಂಚಾಯ್ತಿ, ಶಿಕ್ಷಣ ಇಲಾಖೆ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಅಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾನೂನಿನ ಬಗ್ಗೆ ಅರಿವಿಲ್ಲದಿರುವುದರಿಂದ ಕಾನೂನು ಉಲ್ಲಂಘನೆಯಾಗುತ್ತಿದ್ದು ಈ ಬಗ್ಗೆ ವಿದ್ಯಾರ್ಥಿ ದೆಸೆಯಿಂದಲೇ ತಿಳುವಳಿಕೆ ಮೂಡಿಸುವ ಕೆಲಸ ಸಾಗಬೇಕಿದೆ ಎಂದರು.
ವಕೀಲ ಸಂಘದ ಉಪಾಧ್ಯಕ್ಷ ಸಿ.ರಾಜಶೇಖರ್, ವಕೀಲ ಗಾಣಧಾಳು ರಮೇಶ್, ಸಂಸ್ಥೆಯ ಕಾರ್ಯದರ್ಶಿ ಕವಿತಾ ಕಿರಣ್ ಕುಮಾರ್ ಮಾತನಾಡಿದರು. ಸಹಾಯಕ ಸರ್ಕಾರಿ ಅಭಿಯೋಜಕರಾದ ಆರ್.ರವಿಚಂದ್ರ ,ಸಿ.ಬಿ.ಸಂತೋಷ್, ಪ್ರಾಂಶುಪಾಲ ರವಿ,ಎ.ಎಸ್.ಐ. ಶಿವಪ್ಪ, ವಕೀಲ ಸಂಘದ ಕಾರ್ಯದರ್ಶಿ ಆದರ್ಶ್,ವಿಶ್ವನಾಥ್ ಇನ್ನಿತರರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ