ತಾಲೂಕಿನ ಕೊಡಲಾಗರ ಗ್ರಾಮದ ಬ್ಯಾಟೆರಂಗನಾಥ ಸ್ವಾಮಿ ದೇವಾಲಯದ ಹುಂಡಿಯನ್ನು ಕಳ್ಳರು ದೋಚಿದ್ದಾರೆ. ಗುರುವಾರ ರಾತ್ರಿ ಊರ ಹೊರಗಿನ ದೇವಾಲಯದ ಹುಂಡಿಯನ್ನು ಕಳ್ಳರು ಹೊಡೆದು ತೆಗೆದಿದ್ದಾರೆ. ನಂತರ ದೇವಾಲಯದ ಬೀಗವನ್ನು ಸಹ ಒಡೆದಿದ್ದಾರೆ. ತಾಲೂಕಿನಲ್ಲಿ ಇತ್ತೀಚೆಗೆ ನಡೆದಿರುವ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದು ಪೊಲೀಸರಿಗೆ ತಲೆನೋವಾಗಿದೆ. ಊರಹೊರಗಿರುವ ದೇವಾಲಯಗಳಿಗೆ ಗ್ರಾಮಸ್ಥರು ಸೂಕ್ತ ರಕ್ಷಣೆ ಒದಗಿಸಿಕೊಳ್ಳ ಬೇಕಾಗಿದೆ. ಇಲ್ಲದಿದ್ದರೆ, ನಿಧಿಯ ಆಸೆಗೆ ದೇವರ ವಿಗ್ರಹಗಳನ್ನೇ ಕಿತ್ತುಹಾಕಿದರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ. ಸ್ಥಳಕ್ಕೆ ಪೋಲೀಸ್ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ್ ಭೇಟಿ ನೀಡಿ ಮಹಜರು ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ