ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿರುವವರಲ್ಲಿ ಹಲವರು ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದವರೇ ಆಗಿದ್ದು ಅಗತ್ಯ ಸವಲತ್ತು ನೀಡಬೇಕೆಂದು ವಿಧಾನ ಪರಿಷತ್ ಸದಸ್ಯೆ ಹಾಗೂ ಚಲನಚಿತ್ರ ನಟಿ ಜಯಮಾಲ ಹೇಳಿದರು.
ಚಿಕ್ಕನಾಯಕನಹಳ್ಳಿಯ ಕನಕ ಭವನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ 2014-15ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿಭೆ ಯಾರೊಬ್ಬರ ಸ್ವತ್ತಲ್ಲ, ಚಿಕ್ಕನಾಯಕನಹಳ್ಳಿಯಿಂದ ಬಂದಂತಹ ಸಾ.ಶಿ.ಮರುಳಯ್ಯನವರ, ಲಿಂಗದೇವರು ಹಳೆಮನೆಯಂತಹವರು ಸಾಹಿತ್ಯ ಕ್ಷೇತ್ರದಲ್ಲಿ, ಚಲನಚಿತ್ರದಲ್ಲಿ ರಾಷ್ಟ್ರಪ್ರಶಸ್ತಿ ಪಡೆದಿರುವ ಬಿ.ಎಸ್. ಲಿಂಗದೇವರು, ಮೇಕಪ್‌ಮ್ಯಾನ್ ರಾಜು ಇನ್ನಿತರರು ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆಂದರು.
ವಿದ್ಯಾಭ್ಯಾಸ ಮುಂದುವರಿಸಲು ಯಾರಿಗೆ ತೊಂದರೆ ಇದ್ದರೂ ತನ್ನ ಬಳಿ ಬಂದು ಸಮಸ್ಯೆ ಹೇಳಿಕೊಂಡರೆ ವಿದ್ಯಾಭ್ಯಾಸಕ್ಕೆ ನೆರವಾಗುತ್ತೇನೆ. ಇನ್ನು ಚಿಕ್ಕನಾಯಕನಹಳ್ಳಿಗೆ ತಾಂತ್ರಿಕ ಶಿಕ್ಷಣ ತರಲು ಶ್ರಮಿಸುತ್ತೇನೆಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು
ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಮಾತನಾಡಿ, ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ ಮಾತನಾಡಿ, ಬೆಂಗಳೂರು ಬಿಬಿಎಂಪಿ ಉಪ ಆಯುಕ್ತ ಸಿ.ಟಿ.ಮುದ್ದುಕುಮಾರ್ ಮಾತನಾಡಿದರು.
ಈ ವೇಳೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾಳಿದಾಸ ವಿದ್ಯಾವರ್ದಕ ಸಂಘದ ಅಧ್ಯಕ್ಷ ಬಿ.ಕೆ.ಮಂಜುನಾಥ್, ಪುರಸಭಾಧ್ಯಕ್ಷೆ ರೇಣುಕಮ್ಮ, ಜಿಪಂ ಸದಸ್ಯೆ ಮಂಜುಳಗವಿರಂಗಯ್ಯ, ಸಾಹಿತಿ ಚಿಕ್ಕಣ್ಣ ಎಣ್ಣೆಕಟ್ಟೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಬಸವರಾಜು, ಕನ್ನಡ ಸಂಘದ ಅಧ್ಯಕ್ಷ ಸೀಮೆಎಣ್ಣೆಕೃಷ್ಣಯ್ಯ, ರೇವಣ ಸಿದ್ದೇಶ್ವರ ಕಂಬಳಿ ಸೊಸೈಟಿ ಅಧ್ಯಕ್ಷ ಕೆ.ಪಿ.ಧೃವಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಪರಶಿವಮೂರ್ತಿ, ಕಾಳಿದಾಸ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿ.ಟಿ.ಗುರುಮೂರ್ತಿ ಮತ್ತಿತರರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ