ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಹೋಬಳಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಟ್ಟಣದ ಕನಕದಾಸ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರವನ್ನು ಶನಿವಾರದಂದು ಕನಕದಾಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಪುರಸ್ಕಾರ ವಿತರಿಸಿದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಾಜಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ತಮ್ಮದೇ ಆದ ಪ್ರತಿಭೆಯಿದೆ. ವಿದ್ಯಾರ್ಥಿಗಳು ಉತ್ತಮವಾಗಿ ಅಭ್ಯಾಸ ಮಾಡುವ ಮೂಲಕ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಳಿಸಿ ಪ್ರತಿಭಾಪುರಸ್ಕಾರವನ್ನು ಪಡೆಯುವಂತಾಗಬೇಕು ಎಂದರು. ಸಂಘದ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಕಳೆದ ೮ ವರ್ಷದಿಂದ ಈ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವುದಾಗಿ ತಿಳಿಸಿದರು.
ಸಂಘದ ಸದಸ್ಯರಾದ ಶಂಕರ್ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿದರು. ಈ ವೇಳೆ ಶಾಲೆಯ ಮುಖ್ಯಶಿಕ್ಷಕ ಚನ್ನಬಸಪ್ಪ, ಸಂಸ್ಥೆಯ ಕಾರ್ಯದರ್ಶಿ ಶಿವಪ್ರಕಾಶ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಶಿವಣ್ಣ,ಖಜಾಂಚಿ ಪುಷ್ಪಲತಾ, ಸದಸ್ಯರಾದ ಸ್ಟುಡಿಯೋ ದುರ್ಗರಾಜು,ರವಿ,ಯತೀಶ್,ರಾಜೇಂದ್ರನಾಯಕ್,ಶಿವಯ್ಯ, ಸುರೇಶ್,ಲೋಕೇಶ್, ರಾಘವೇಂದ್ರನಾಯಕ್ ಸೇರಿದಂತೆ ಶಾಲಾಶಿಕ್ಷಕರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ