ಇಲ್ಲಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಪರಿಸರದ ಮಹತ್ವ ತಿಳಿಸಿ ಜಾಗೃತಿ ಉಂಟುಮಾಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.
|
ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ಕವಿತಾ ಕಿರಣ್ ಕುಮಾರ್ ಗಿಡಕ್ಕೆ ನೀರು ಹಾಕುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು. |
|
ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಪರಿಸರ ದಿನಾಚರಣೆಯಲ್ಲಿ ಮಕ್ಕಳಿಗೆ ಸಸಿ ವಿತರಿಸಲಾಯಿತು. |
ಶಾಲೆಯ ಕಾರ್ಯದರ್ಶಿ ಕವಿತಾ ಕಿರಣ್ ಕುಮಾರ್ ಗಿಡಕ್ಕೆ ನೀರು ಹಾಕುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಪರಿಸರ ರಕ್ಷಣೆಯಿಂದಾಗುವ ಅನುಕೂಲದ ಬಗ್ಗೆ ಹಾಗೂ ವಿದ್ಯಾರ್ಥಿಗಳು ಯಾವರೀತಿ ಪರಿಸರ ಸಂರಕ್ಷಣೆ ಮಾಡಬಹುದೆಂಬುದರ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಪರಿಸರ ಮಾಲಿನ್ಯದಿಂದಾಗುವ ಅನಾಹುತ ಹಾಗೂ ಅದನ್ನು ಸಂರಕ್ಷಿಸುವ ಬಗ್ಗೆ ಹಾಡು ಹಾಗೂ ನೃತ್ಯರೂಪಕ ಪ್ರದರ್ಶಿಸಿದರು. ವಿವಿಧ ಆಟೋಟಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವಾಗಿ ಗಿಡಗಳನ್ನು ವಿತರಿಸಿದರು.ಈ ವೇಳೆ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಕಿರಣ್ ಕುಮಾರ್, ಪ್ರಾಂಶುಪಾಲ ರವಿ, ಶಿಕ್ಷಕ ಮಹಂತೇಶ್ ಹಾಗೂ ಶಿಕ್ಷಕ ವೃಂದ, ಸಿಬ್ಬಂದಿಯವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ