ಹುಳಿಯಾರು ಹೋಬಳಿ ಯಳನಡು ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಬಸವರಾಜು ಹಾಗೂ ಉಪಾಧ್ಯಕ್ಷರಾಗಿ ಶ್ವೇತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಂಚಾಯ್ತಿಯ ಒಟ್ಟು ೧೭ ಸ್ಥಾನಗಳ ಪೈಕಿ ೧೨ ಮಂದಿ ಕಾಂಗ್ರೆಸ್ ಬೆಂಬಲಿತರು ಹಾಗೂ ೫ ಮಂದಿ ಬಿಜೆಪಿ ಬೆಂಬಲಿತರಿದ್ದರು. ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ ಹಾಗೂ ಸಾಮಾನ್ಯ ಮಹಿಳೆ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನದ ಮಿಸಲಾತಿ ಬಂದಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಸವರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ವೇತ ಉಮೇದುವಾರಿಕೆ ಸಲ್ಲಿಸಿದ್ದು ಬಿಟ್ಟರೆ ಮತ್ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅವರುಗಳನ್ನೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಘೋಷಿಸಲಾಯಿತು. ಬಹುಮತಕ್ಕೆ ಬೇಕಾದ ೧೨ ಮಂದಿ ಸದಸ್ಯರು ಕಾಂಗ್ರೆಸ್ ಬೆಂಬಲಿತರೇ ಆಗಿದ್ದ ಹಿನ್ನಲೆಯಲ್ಲಿ ಪ್ರತಿಪಕ್ಷದವರ್ಯಾರು ನಾಮಪತ್ರಸಲ್ಲಿಸಲು ಮುಂದಾಗಿರಲಿಲ್ಲ.
ಸಹಾಯಕ ಕೃಷಿ ನಿರ್ದೇಶಕ ಹೊನ್ನದಾಸೇಗೌಡ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಜಿಲ್ಲಾ ಕಾಂಗ್ರೆಸ್ ಸದಸ್ಯ ವೈ.ಸಿ.ಸಿದ್ದರಾಮಯ್ಯ, ಗ್ರಾ.ಪಂ.ಸದಸ್ಯರಾದ ರಮೇಶ್,ದಯಾನಂದ್, ಸುನಂದ,ಕಾಟಲಿಂಗಯ್ಯ,ಗಂಗಾಧರಯ್ಯ, ಕುಮಾರಯ್ಯ, ಗುರುಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ