ಜನಾನುರಾಗಿಯಾಗಿ ಅಜ್ಜಣ್ಣಮೇಷ್ಟ್ರು ಎಂದೇ ಹೆಸರಾಗಿದ್ದ ಹೋಬಳಿಯ ಕೆಂಕೆರೆ ಗ್ರಾಮದ ಬಾಲಿಂಗೇಗೌಡ್ರು (೭೩ ವರ್ಷ) ಅವರು ಗುರುವಾರ ಮುಂಜಾನೆ ಮೃತಪಟ್ಟರು.
ಕೆಂಕೆರೆಯ ಪ್ರಾಥಮಿಕ ಪಾಠಶಾಲೆ ಹಾಗೂ ಸುತ್ತಮುತ್ತಲ ಹಳ್ಳಿಗಳಲ್ಲಿ ಶಿಕ್ಷಕರಾಗಿ ವೃತ್ತಿಸಲ್ಲಿಸಿ ನಿವೃತ್ತರಾಗಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಶಸ್ತ್ರ ಚಿಕಿತ್ಸೆ ಸಹ ಮಾಡಿಸಿದ್ದು , ಚೇತರಿಸಿಕೊಳ್ಳುತ್ತಿದ್ದರು. ದುರಾದೃಷ್ಟವಶಾತ್ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ, ಮೃತರು ಒಬ್ಬ ಮಗ, ಇಬ್ಬರು ಹೆಣ್ಣುಮಕ್ಕಳು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಕೆಂಕೆರೆ ಗ್ರಾ.ಪಂ.ಅಧ್ಯಕ್ಷೆ ಜಯಮ್ಮ , ತಾ.ಪಂ.ಸದಸ್ಯ ನವೀನ್ ಸೇರಿದಂತೆ ಗ್ರಾ.ಪಂ.ಸದಸ್ಯರುಗಳು , ಶಾಲಾ ಶಿಕ್ಷಕರು ಮೃತರ ಅಂತಿಮ ದರ್ಶನ ಪಡೆದರು. ಮೃತರ ತೋಟದಲ್ಲಿ ಅಂತ್ಯಕ್ರಿಯೆ ಸಂಜೆ ನಡೆಯಿತು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ