ಹುಳಿಯಾರು : ಪಟ್ಟಣದ ಮಾರುತಿನಗರದ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆ ಅಂಗವಾಗಿ ಆಂಜನೇಯನಿಗೆ ವಿಶೇಷ ಪೂಜೆ ಹಾಗೂ ಅಲಂಕಾರ ಸೇವೆ ನಡೆಸಲಾಯಿತು.
ಸ್ಚಾಮಿಗೆ ಅಭಿಷೇಕ, ಅರ್ಚನೆಯ ನಂತರ ಅಲಂಕಾರ , ಮುಖ್ಯಪ್ರಾಣ ಭಜನಾ ಮಂಡಳಿಯವರಿಂದ ಭಜನೆ ನಡೆಯಿತು. ದೇವಾಲಯಕ್ಕೆ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತಾಧಿಗಳಿಗೆ ಮುದ್ದೆ ಊಟ ಬಡಿಸಿದ್ದು ವಿಶೇಷವಾಗಿತ್ತು. ಈ ವೇಳೆ ದೇವಾಲಯ ಕಮಿಟಿಯ ಸದಸ್ಯರು ಸೇರಿದಂತೆ ಇತರರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ