ಹುಳಿಯಾರು ಹೋಬಳಿ ಬೋರನಕಣಿವೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಉದ್ಘಾಟನೆ ಹಾಗೂ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳ ಉದ್ಟಾಟನೆಯನ್ನು ಸಚಿವ ಟಿ.ಬಿ.ಜಯಚಂದ್ರ ನೆರವೇರಿಸಿದರು.
ಹುಳಿಯಾರು ಹೋಬಳಿ ಬೋರನಕಣಿವೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಐಟಿಐ ಕಾಲೇಜಿನ ಉದ್ಟಾಟನೆಯನ್ನು ಸಚಿವ ಟಿ.ಬಿ.ಜಯಚಂದ್ರ ನೆರವೇರಿಸಿದರು. |
ನಂತರ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಕಾರ್ಯಕ್ಕೂ ಯಂತ್ರಗಳ ಬಳಕೆ ಹೆಚ್ಚುತ್ತಿದ್ದು ತಾಂತ್ರಿಕ ವಿಷಯ ಅಧ್ಯಯನ ಮಾಡಿದವರಿಗೆ ಹೆಚ್ಚು ಬೇಡಿಕೆ ಬರುತ್ತಿದೆ ಎಂದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಾಂತ್ರಿಕ ಕೋರ್ಸ್ ಗಳನ್ನು ಮಾಡಬೇಕೆಂದರೆ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಇರುವ ಕಾಲೇಜುಗಳಿಗೆ ಹೋಗಬೇಕು ಇದರಿಂದ ಹೆಚ್ಚಿನ ಹಣವನ್ನು ಪೋಷಕರು ಭರಿಸಬೇಕಾಗುತ್ತದೆ. ಇದನ್ನು ಮನಗಂಡು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ದೃಷ್ಠಿಯಿಂದ ಐಟಿಐ ಕಾಲೇಜನ್ನು ಈ ಭಾಗದಲ್ಲಿ ಪ್ರಾರಂಭಿಸಿದ್ದು, ಸದ್ಯ ಪದವಿಪೂರ್ವ ಕಾಲೇಜಿನ ಕಟ್ಟಡಲ್ಲಿ ತರಗತಿಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಸ್ವಂತ ಕಟ್ಟಡದ ವ್ಯವಸ್ಥೆ ಮಾಡಿಸಿಕೊಡುವುದಾಗಿ ತಿಳಿಸಿದರು.
ಕಾಯಂ ಕೆಲಸ : ಬೋರನಕಣಿವೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಯಾರು ಅಭ್ಯಾಸ ಮಾಡುತ್ತಾರೋ ಅವರಿಗೆ ತಾವು ಖಾಯಂ ಕೆಲಸ ಕೋಡಿಸುವುದಾಗಿ ಭರವಸೆ ನೀಡಿದರು.
ಸಂಸದ ಮುದ್ದಹನುಮೇಗೌಡ ಮಾತನಾಡಿ ಗ್ರಾಮೀಣ ಭಾಗದಲ್ಲೂ ಸಹ ಪ್ರತಿಭಾವಂತ ಮಕ್ಕಳಿದ್ದು ಅವರಿಗೆ ಸೂಕ್ತ ಸವಲತ್ತುಗಳಿಲ್ಲದೆ ಅವರು ನಗರ ಪ್ರದೇಶದ ಮಕ್ಕಳಿಗಿಂತ ಹಿಂದುಳಿಯುವಂತಾಗಿದೆ ಎಂದರು. ಇದೀಗ ಸರ್ಕಾರ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆ ರೂಪಿಸಿದ್ದು ಶಾಲಾಕಾಲೇಜುಗಳನ್ನು ಹಳ್ಳಿಗಳ ಮಟ್ಟದಲ್ಲಿ ಸ್ಥಾಪಿಸುತ್ತಿದೆ ಎಂದರು. ಈ ವೇಳೆ ಶಾಸಕ ಸುರೇಶ್ ಬಾಬು, ತಾ.ಪಂ.ಅಧ್ಯಕ್ಷೆ ಜಯಲಕ್ಷ್ಮಮ್ಮ, ಗ್ರಾ.ಪಂ.ಅಧ್ಯಕ್ಷೆ ಮಂಜುಳಾ,ಜಿ.ಪಂ.ಸದಸ್ಯೆ ನಿಂಗಮ್ಮ,ತಾ.ಪಂ.ಸದಸ್ಯೆ ಕವಿತಾಪ್ರಕಾಶ್ ಸೇರಿದಂತೆ ಶಾಲಾ ಶಿಕ್ಷಕರು, ಸಿಬ್ಬಂದಿಯವರು ಉಪಸ್ಥಿತರಿದ್ದರು. ಇದೇ ವೇಳೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸರಿಸಲಾಯಿತು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ