ಪ್ರಸಕ್ತ ಸನ್ನಿವೇಶದಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ವಿದ್ಯಾರ್ಥಿಗಳು ಪಣತೊಡಬೇಕು ಎಂದು ತುಮಕೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಕೆ.ಎಸ್.ಜಗದೀಶ್ ತಿಳಿಸಿದರು.
ಹುಳಿಯಾರು–ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾದ ನಡೆದ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್ ಎಸ್ ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಪ್ರತಿಯೊಂದು ರಂಗದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೇ ಮುಂದೊಂದು ದಿನ ಕಷ್ಟಕರ ಸ್ಥಿತಿ ನಿರ್ಮಾಣವಾಗುತ್ತದೆ. ವಿದ್ಯಾರ್ಥಿ ಶಕ್ತಿ ದೇಶದ ಬೆನ್ನುಲುಬಾಗಿದ್ದು ಆ ಸಮುದಾಯದ ಮೇಲೆ ಗುರುತರ ಜವಾಬ್ದಾರಿ ಇದೆ. ದೇಶ ವಿಷಮ ಸ್ಥಿತಿ ತಲುಪುವ ಮೊದಲು ವಿದ್ಯಾರ್ಥಿಗಳು ಭ್ರಷ್ಟಾಚಾರ ಮಾಡುವುದಿಲ್ಲ, ಮಾಡುವವರನ್ನೂ ಬಿಡುವುದಿಲ್ಲ ಎಂಬ ಪ್ರತಿಜ್ಞೆ ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾತನಾಡಿ ವಿದ್ಯಾರ್ಥಿ ಜೀವನ ಬಹು ಮುಖ್ಯ ಘಟ್ಟವಾಗಿದ್ದು ವಿದ್ಯಾರ್ಥಿಗಳು ಸತತ ಅಭ್ಯಾಸದ ಮೂಲಕ ಉತ್ತಮ ಶಿಕ್ಷಣ ಪಡೆದು ಸುಸಂಸ್ಕೃತರಾಗಬೇಕು ಎಂದರು. ತಾಲ್ಲೂಕು ಪಂಚಾಯಿತಿ ಸದಸ್ಯೆ ಬೀಬಿ ಪಾತಿಮಾ, ಮುಖಂಡರಾದ ನಂದಿಹಳ್ಳಿ ಶಿವಣ್ಣ, ಜಲಾಲ್ ಸಾಬ್, ರಿಯಾಜ್ ಅಹಮದ್, ಪ್ರಾಂಶುಪಾಲರಾದ ನಟರಾಜು ಇತರರು ಇದ್ದರು. ಉಪನ್ಯಾಸಕ ಶಶಿಭೂಷಣ್ ನಿರೂಪಿಸಿ, ನಿರಂಜನ್ ವಂದಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ