ಪಟ್ಟಣದ ಕಾಮನಬಿಲ್ಲು ಫೌಂಡೇಷನ್ ವತಿಯಿಂದ ೬೯ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸರ್ಕಾರಿ ಆಸ್ಪತ್ರೆ ಹಾಗೂ ಸ್ಪಂದನ ನರ್ಸಿಂಗ್ ಹೋಮಿನ ರೋಗಿಗಳಿಗೆ ಹಾಲು ಹಣ್ಣು ವಿತರಿಸಲಾಯಿತು.
ಗೌರವಾಧ್ಯಕ್ಷ ಈಶ್ವರಯ್ಯ ಮಾತನಾಡಿ ಸಂಘದಿಂದ ಕಳೆದ ಕೆಲ ವರ್ಷಗಳಿಂದ ಈ ಒಂದು ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬಂದಿದ್ದು ಈ ಬಾರಿ ಪಥಸಂಚಲನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ತಂಡಕ್ಕೆ ನಗದು ಬಹುಮಾನ ನೀಡಲಾಗುವುದು ಎಂದರು.ಮುಂದಿನ ದಿನಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಉಚಿತ ರಕ್ತ ಪರೀಕ್ಷೆ ಶಿಬಿರ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಈ ವೇಳೆ ವಿಶ್ವನಾಥ್,ಕಾರ್ಯದರ್ಶಿ ವಿಜಯ್ ಕುಮಾರ್,ಏಜೆಂಟ್ ಕೇಶವ, ಮೆಡಿಕಲ್ ಚನ್ನಬಸವಯ್ಯ,
ಸ್ಟುಡಿಯೋ ರವಿ,ಕರವೇ ಶ್ರೀನಿವಾಸ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ