ಹುಳಿಯಾರು ಪಟ್ಟಣದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಹುಳಿಯಾರು ಹೋಬಳಿ ಸ್ವಾತಂತ್ರ್ಯ ಹೋರಾಟಗಾರರ ಸಂಘದಿಂದ ಗಾಂಧಿಭವನದ ಮುಂಭಾಗ ಆ.೧೪ ರ ಮಧ್ಯರಾತ್ರಿ ೬೯ ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುವುದು.
ಹುಳಿಯಾರು ಹೋಬಳಿ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಜಿ.ಎಸ್.ವೆಂಕಟಾಚಲಪತಿ ಶೆಟ್ಟಿ ಅಧ್ಯಕ್ಷತೆಯಲ್ಲಿ ಪಿಎಸೈ ಪ್ರವೀಣ್ ಕುಮಾರ್ ಧ್ವಜಾರೋಹಣ ನೆರೆವೇರಿಸಲಿದ್ದಾರೆ.
ಪ್ರೋ ಬಿಳಿಗೆರೆ ಕೃಷ್ಣಮೂರ್ತಿ,ಶಿಕ್ಷಕ ಕೊಟ್ಟಿಗೆ ಮನೆ ಗುರುಮೂರ್ತಿ ಪ್ರಧಾನ ಭಾಷಣ ಮಾಡಲಿದ್ದು ಗ್ರಾಪಂ ಅಧ್ಯಕ್ಷೆ ಗೀತಾಪ್ರದೀಪ್,ಉಪಾಧ್ಯಕ್ಷ ಗಣೇಶ್,ಜಿಲ್ಲಾಪಂಚಾಯ್ತಿ ಸದಸ್ಯೆ ಮಂಜುಳ,ಉಪತಹಸಿಲ್ದಾರ್ ಬಸವರಾಜು,ರೈತಸಂಘದ ಕೆಂಕೆರೆ ಸತೀಶ್ ಸೇರಿದಂತೆ ಗ್ರಾಪಂ ಸದಸ್ಯರುಗಳು,ಹತ್ತಾರು ಸಂಘದ ಸದಸ್ಯರುಗಳು ಭಾಗವಹಿಸಲಿದ್ದಾರೆ.ಮಧ್ಯ ರಾತ್ರಿ ೧೧ ಗಂಟೆಯಿಂದ ನಡೆಯುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ