ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿದ್ದಲ್ಲಿ ಅಂತಹ ಕಡೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗುವುದೆಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.
![]() |
ಹುಳಿಯಾರಿನ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಭಾನುವಾರದಂದು ಶಾಸಕ ಸುರೇಶ್ ಬಾಬುರವರು ಶುದ್ಧ ಕುಡಿಯುವ ನೀರಿನ ಘಟಕದ ಶಂಕುಸ್ಥಾಪನೆ ನೆರವೇರಿಸಿದರು. |
ಅವರು ಭಾನುವಾರದಂದು ಪಟ್ಟಣದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಹುಳಿಯಾರಿನಲ್ಲಿ ಮೊದಲಿನಿಂದಲೂ ಶುದ್ದಕುಡಿಯುವ ನೀರಿಗೆ ಸಮಸ್ಯೆಯಿದ್ದು ಬಳಸಲಾಗುತ್ತಿರುವ ನೀರಿನಲ್ಲಿ ಹೆಚ್ಚಿನ ಫ್ಲೋರೈಡ್ ಅಂಶವಿದ್ದು, ಈ ನೀರು ಕುಡಿದ ಜನರು ಹಲವು ರೋಗಗಳಿಗೆ ತುತ್ತಾಗಿದ್ದಾರೆ. ಅದಕೋಸ್ಕರವೇ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದಿಂದ ಇಲ್ಲಿ ಶುದ್ಧ ನೀರಿನ ಘಟಕ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಪ್ರತಿ ಘಟಕಕ್ಕೆ 11 ರಿಂದ 12 ಲಕ್ಷ ವೆಚ್ಚವಾಗಲಿದೆ. ಅಗತ್ಯಬಿದ್ದರೆ ಮತ್ತೊಂದು ಘಟಕ ಸ್ಥಾಪಿಸಲಾಗುವುದೆಂದ ಶಾಸಕರು ಗ್ರಾಮಗಳಲ್ಲಿ ನೀರಿನ ಸಮಸ್ಯೆಯಿದ್ದಲ್ಲಿ ಬೋರ್ ವೆಲ್ ಕೊರೆಸಿಕೊಡುವ ಭರವಸೆ ನೀಡಿದರು

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ