ಹುಳಿಯಾರಿನ ಎಂಪಿಎಸ್ ಶಾಲಾ ಆವರಣದಲ್ಲಿ ಇಂದು (ಶನಿವಾರ) ಸಂಜೆ ಆರು ಗಂಟೆಗೆ ಎಂಟಿಎಸ್ ನಿಂದ ಗ್ರಾಮೀಣ ಸೊಗಡಿನ ಜಾನಪದ ನೃತ್ಯ ಸಂಜೆ ಆಯೋಜಿಸಲಾಗಿದೆ.ಹರಿಕಥಾ ವಿದ್ವಾನ್ ಡಾ.ಲಕ್ಷ್ಮಣ ದಾಸ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಸಾಹಿತಿ ಪ್ರೋ ಬಿಳಿಗೆರೆ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ.ನಾಗರಾಜ್ ಪಿ ಕುಲಕರ್ಣಿ,ವಿಶ್ವನಾಥ್, ಬೀರಪ್ಪನವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಪ್ಪೂರು ವಲಯದ ಜ್ಞಾನ ವಿಕಾಸ ಕೇಂದ್ರದವರು ಹಳ್ಳಿ ಜೀವನ ಬಿಂಬಿಸುವ ಹಾಸ್ಯ ಭರಿತ ವಿಶೇಷ ರೂಪಕ ನಡೆಸಿಕೊಡಲಿದ್ದಾರೆ.ಪ್ರವೇಶ ಉಚಿತವಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಆಯೋಜಕರಾದ ಕಿರಣ್ ಕುಮಾರ್ ಕೋರಿದ್ದಾರೆ.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ