ಹುಳಿಯಾರಿನ ವಿದ್ಯಾವಾರಿಧಿ ಶಾಲೆಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಮಾಜಿ ಶಾಸಕರಾದ ಕೆ.ಎಸ್.ಕಿರಣ್ ಕುಮಾರ್ ಹಾಗೂ ಕಾರ್ಯದರ್ಶಿ ಕವಿತಾ ಕಿರಣ್ ಸ್ವಾಗತಿಸಿದರು. |
ರೈತ ಚೈತನ್ಯ ಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರೂ ಆಗಿರುವ ಬಿ.ಎಸ್.ಯಡಿಯೂರಪ್ಪನವರು ಹಾಗೂ ಶೋಭಾ ಕರಂದ್ಲಾಜೆ ಸಂಸದೆ ಕಿಬ್ಬನಹಳ್ಳಿಗೆ ತೆರಳುವ ಮಾರ್ಗ ಮಧ್ಯೆ ಹುಳಿಯಾರಿನ ವಿದ್ಯಾವಾರಿಧಿ ಶಾಲೆಗೆ ಭೇಟಿ ನೀಡಿದ್ದರು.ಮಾಜಿ ಶಾಸಕರಾದ ಕೆ.ಎಸ್.ಕಿರಣ್ ಕುಮಾರ್,ಶಾಲೆಯ ಕಾರ್ಯದರ್ಶಿ ಶ್ರೀಮತಿ ಕವಿತಾ ಕಿರಣ್ ಕುಮಾರ್ ಹಾಗೂ ಶಾಲಾ ಆಡಳಿತ ಮಂಡಳಿಯವರು ಸ್ವಾಗತಿಸಿದರು.ನಂತರ ಮಾತನಾಡಿದ ಅವರು ರೈತ ಚೈತನ್ಯ ಯಾತ್ರೆಗೆ ರಾಜ್ಯದ ಎಲ್ಲ ಕಡೆ ರೈತರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಬಿಜೆಪಿ ರೈತರ ಪರವಾಗಿದ್ದು ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬೇಡಿ ಎಂದರು.
ಇದೇ ವೇಳೆ ಹುಳಿಯಾರು ಹೆದ್ದಾರಿ ಅಗಲೀಕರಣಕ್ಕೆ ಸಂಬಂಧಿಸಿದಂತೆ ಬೈಪಾಸ್ ರಸ್ತೆ ನಿರ್ಮಿಸಲು ಶಿಫಾರಸ್ಸು ಮಾಡುವಂತೆ ನಾಗರೀಕ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ