ಅಂಚೆ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ
-------------------------------------
-------------------------------------
ಇಂದಿರಾ ಮತ್ತು ರಾಜೀವ್‌ಗಾಂಧಿ ಭಾವಚಿತ್ರದ ಅಂಚೆಚೀಟಿಗಳನ್ನು ರದ್ದುಪಡಿಸುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಹುಳಿಯಾರಿನ ಅಂಚೆ ಕಚೇರಿ ಎದುರು ಪ್ರತಿಭಟಿಸಿದರು.ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಭಾವಚಿತ್ರದ ಅಂಚೇಚೀಟಿಗಳನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂದಿರಾ ಮತ್ತು ರಾಜೀವ್‌ಗಾಂಧಿ ಭಾವಚಿತ್ರದ ಅಂಚೆಚೀಟಿಗಳನ್ನು ರದ್ದುಪಡಿಸುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಹುಳಿಯಾರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಅಂಚೆ ಕಚೇರಿ ಎದುರು ಪ್ರತಿಭಟಿಸಿದರು. |
ದೇಶಕ್ಕೆ ಉನ್ನತ ಕೊಡುಗೆ ನೀಡಿದ ಪ್ರಧಾನಮಂತ್ರಿಗಳ ಭಾವಚಿತ್ರವಿರುವ ಅಂಚೆಚೀಟಿಗಳನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರ ಈ ರಾಷ್ಟ್ರನಾಯಕರಿಗೆ ಅವಮಾನ ಮಾಡಿದೆ. ಬ್ಯಾಂಕ್‌ಗಳ ರಾಷ್ಟ್ರೀಕರಣ, ಗರೀಬಿ ಹಠಾವೋ ಮುಂತಾದ ಜನಪರ ಕಾರ್ಯಕ್ರಮಗಳ ಮೂಲಕ ದೇಶಕ್ಕೆ ಕೊಡುಗೆ ನೀಡಿದ ಇಂದಿರಾ ಗಾಂಧಿಯಂತಹ ನಾಯಕರ ಭಾವಚಿತ್ರವುಳ್ಳ ಅಂಚೆ ಚೀಟಿಗಳನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ದುರುದ್ದೇಶದಿಂದ ಕೂಡಿದೆ ಎಂದು ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಹೊಸಳ್ಳಿ ಅಶೋಕ್ ಆರೋಪಿಸಿದರು.
ಪ್ರಸನ್ನಕುಮಾರ್ ಮಾತನಾಡಿ ಈ ಹಿಂದೆ ಯುಪಿಎ ಸರ್ಕಾರ ಆರ್ಎಸ್ಎಸ್ ಮೂಲದ ವ್ಯಕ್ತಿಯೊಬ್ಬರ ಭಾವಚಿತ್ರವಿದ್ದ ಅಂಚೆಚೀಟಿ ಹೊರ ತಂದಿತ್ತು .ಮೋದಿ ನೇತೃತ್ವದ ಸರ್ಕಾರ ಇಬ್ಬರು ಪ್ರಭಾವಿ ವ್ಯಕ್ತಿಗಳ ಭಾವಚಿತ್ರದ ಅಂಚೆ ಚೀಟಿ ರದ್ದುಪಡಿಸುವ ಕೆಟ್ಟ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿಜಿಯವರ ಭಾವಚಿತ್ರವಿರುವ ಅಂಚೆ ಚೀಟಿ ರದ್ದುಗೊಳಿಸಿ, ಆದೇಶ ಹೊರಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ನೋವು ತಂದಿದೆ. ಕೂಡಲೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಗ್ರಾ.ಪಂ. ಸದಸ್ಯರಾದ ಧನುಷ್ ರಂಗನಾಥ್ ಒತ್ತಾಯಿಸಿದರು.
ಎಪಿಎಂಸಿ ಅಧ್ಯಕ್ಷ ಯಳನಡು ಸಿದ್ದರಾಮಯ್ಯ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಶಿವಕುಮಾರ್, ವೆಂಕಟೇಶ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಅಮಿತ್, ವಿನೋದ್, ಕಾಂಗ್ರೆಸ್ ಮುಖಂಡರಾದ ಬಿ.ವಿ.ಶ್ರೀನಿವಾಸ್ ಇತರರು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ