ಹುಳಿಯಾರು ಪಟ್ಟಣದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಸೋಮವಾರದಂದು ಚಾಲನೆ ನೀಡಲಿದ್ದಾರೆ.ಬೆಳಿಗ್ಗೆ ಹತ್ತು ಗಂಟೆಗೆ ಗ್ರಾಮಪಂಚಾಯ್ತಿ ಅಧ್ಯಕ್ಷರು ಹಾಗೂ ಸದಸ್ಯರುಗಳು,ದೇವಾಲಯ ಸಮಿತಿ ಸದಸ್ಯರುಗಳ ಸಮ್ಮುಖದಲ್ಲಿ ಉದ್ಘಾಟನ ಸಮಾರಂಭ ಏರ್ಪಡಿಸಲಾಗಿದೆ.
ನೀರಿನ ಘಟಕದ ಬಗ್ಗೆ ಪತ್ರಿಕೆಗೆ ಮಾಹಿತಿ ನೀಡಿ ಮಾತನಾಡಿದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಡವೀಶ್ ಕುಮಾರ್ ಹುಳಿಯಾರಿನಲ್ಲಿ ಬಳಸಲಾಗುತ್ತಿರುವ ನೀರಿನಲ್ಲಿ ಹೆಚ್ಚಿನ ಫ್ಲೋರೈಡ್ ಅಂಶವಿದ್ದು, ಈ ನೀರು ಬಳಸಿದಲ್ಲಿ ಜನರು ಹಲವು ರೋಗಗಳಿಗೆ ತುತ್ತಾಗುತ್ತಾರೆ.ಹಾಗಾಗಿ ಶುದ್ದಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದಿಂದ ಶುದ್ಧ ನೀರಿನ ಘಟಕ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಪ್ರತಿ ಘಟಕಕ್ಕೆ 11 ರಿಂದ 12 ಲಕ್ಷ ವೆಚ್ಚವಾಗಲಿದ್ದು ಎರಡು ರೂಪಾಯಿಗೆ ಇಪ್ಪತ್ತು ಲೀಟರ್ ಶುದ್ದನೀರು ದೊರೆಯಲಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ