ಗ್ರಾಮೀಣ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಸರ್ಕಾರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸ ಹೊರಟಿರುವುದು ಶ್ಲಾಘನೀಯವಾಗಿದ್ದು ಕಡಿಮೆ ದರದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಸ್ಥಾಪಿಸಿರುವ ಈ ಘಟಕವನ್ನು ಸಾರ್ವಜನಿ ಕರು ಸದ್ಬಳಕೆ ಮಾಡಿ ಕೊಳ್ಳಬೇಕು. ಇದರಿಂದ ಆರೋಗ್ಯ ಉತ್ತಮವಾಗಿ ರುತ್ತದೆ ಎಂದು ತಾ.ಪಂ. ಮಾಜಿ ಸದಸ್ಯ ವೈ.ಆರ್. ಮಲ್ಲಿಕಾರ್ಜುನಯ್ಯ ತಿಳಿಸಿದರು.
ಹುಳಿಯಾರು ಹೋಬಳಿ ಯಳನಡುವಿನಲ್ಲಿ ಸರ್ಕಾರದ ವತಿಯಿಂದ ನಿರ್ಮಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜನಸಾಮಾನ್ಯರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಬಹುಮುಖ್ಯ ಜವಾಬ್ದಾರಿಯಾಗಿದ್ದು ಈ ನಿಟ್ಟಿನಲ್ಲಿ ಹಳ್ಳಿಹಳ್ಳಿಗೆ ಶುದ್ಧ ನೀರಿನ ಘಟಕ ತೆರೆದು ಕೇವಲ ೨ ರೂಗೆ ೨೦ ಲೀಟರ್ ಮಿನರಲ್ ವಾಟರ್ ಕೊಡುವ ಯೋಜನೆ ಪ್ರಾರಂಭಿಸಿರುವುದು ಶ್ಲಾಘನೀಯ. ಇಲ್ಲಿನ ನಿವಾಸಿಗಳು ಇದರ ಸದ್ಬಳಕೆ ಮಾಡಿಕೊಂಡು ಅಡಿಗೆ ಹಾಗೂ ಕುಡಿಯಲು ಇಂತಹ ನೀರನ್ನು ಬಳಸಿ ಆರೋಗ್ಯದಿಂದಿರುವಂತೆ ಕಿವಿ ಮಾತು ಹೇಳಿದರು.
ಗ್ರಾ.ಪಂ.ಅಧ್ಯಕ್ಷ ಟಿ.ಎಸ್.ಬಸವರಾಜು ಅವರು ಮಾತನಾಡಿ ಯಳನಡು ಗ್ರಾಮ ಧಾರ್ಮಿಕ ಕ್ಷೇತ್ರವಾಗಿದ್ದು ಶ್ರೀ ಸಿದ್ಧರಾಮೇಶ್ವರ ಸ್ವಾಮಿಗೆ ರಾಜ್ಯಾದ್ಯಂತವಲ್ಲದೆ ಹೊರ ರಾಜ್ಯದಲ್ಲೂ ಭಕ್ತರಿದ್ದಾರೆ. ಸ್ವಾಮಿಯ ದರ್ಶನಕ್ಕೆ ನಿತ್ಯ ನೂರಾರು ಭಕ್ತರಲ್ಲದೆ ದಸರಾ ಮಹೋತ್ಸವ ಮತ್ತಿತರ ಜಾತ್ರಾ ಮಹೋತ್ಸವಗಳಲ್ಲಿ ಅಪಾರ ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ಈ ನೀರಿನ ಘಟಕದಿಂದ ಅನುಕೂಲವಾದಂತಾಗತ್ತದೆ ಎಂದರು. ಗ್ರಾಪಂ ಉಪಾಧ್ಯಕ್ಷೆ ಶ್ವೇತ, ಸದಸ್ಯರುಗಳಾದ ದಯಾನಂದ್, ರಮೇಶ್, ಗುರುಪ್ರಸಾದ್, ರಾಮಲಿಂಗಯ್ಯ, ಗಂಗಾ‘ರಯ್ಯ, ಪಾರ್ವತಮ್ಮ ಮತ್ತಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ