ವಿಷಯಕ್ಕೆ ಹೋಗಿ

ಗಾಣಧಾಳು ಗ್ರಾ.ಪಂ. ಕಚೇರಿಗೆ ಬೀಗ

ಶುಕ್ರವಾರ ಬೀಗ ತೆರವು
 ಹುಳಿಯಾರು ಹೋಬಳಿ ಗಾಣಧಾಳು ಗ್ರಾಮ ಪಂಚಾಯ್ತಿಗೆ ನರೇಗಾ ಕಾಮಗಾರಿ ಬಿಲ್ ಪಾವತಿಸಲು                                      ಒತ್ತಾಯಿಸಿ ಬೀಗಜಡಿದು ಪ್ರತಿಭಟಿಸಿದರು.
ಉದ್ಯೋಗಖಾತ್ರಿ ಕಾಮಗಾರಿಗಳ ಹಣ ಬಿಡುಗಡೆ ವಿಳಂಬ ಖಂಡಿಸಿ ಫ‌ಲಾನುಭವಿಗಳು ಗ್ರಾ.ಪಂಗೆ 
 ಬೀಗ ಜಡಿದು ಪ್ರತಿಭಟಿಸಿದ ಘಟನೆ ಹೋಬಳಿಯ ಗಾಣಧಾಳು ಗ್ರಾಮದಲ್ಲಿ ಗುರುವಾರ ನಡೆಯಿತು.
ಗ್ರಾ.ಪಂ.ಯಲ್ಲಿ ಅಧ್ಯಕ್ಷೆ ಸರಸ್ವತಿಬಾಯಿ ಸಾಮಾನ್ಯ ಸಭೆ ಕರೆದಿದ್ದರು. 

ವಿಷಯ ತಿಳಿದ ಗ್ರಾಮಸ್ಥರು ಸಭೆಯ ನಡುವೆಯೇ ಉದ್ಯೋಗ ಖಾತ್ರಿ ಹಣ ಪಾವತಿಗೆ ಒತ್ತಾಯಿಸಿದರು. ‘ಮೊದಲು ನಮ್ಮ ಕೂಲಿ ಹಣ ಕೊಡಿ, ಆಮೇಲೆ ನಿಮ್ಮ ಸಭೆ ನಡೆಸಿ’ ಎಂದಾಗ ಗ್ರಾಪಂ ಸದಸ್ಯರುಗಳು ಅವರುಗಳ ಬೆಂಬಲಕ್ಕೆ ನಿಂತರು. ನರೇಗಾ ಯೋಜನೆಯಡಿ ಚೆಕ್ ಡ್ಯಾಂ, ಹುದಿ– ಬದು ನಿರ್ಮಾಣ, ಕೊಟ್ಟಿಗೆ ಮನೆ, ಇಂಗುಗುಂಡಿ ಸೇರಿದಂತೆ ಅನೇಕ ಕಾಮಗಾರಿ ಪೂರ್ಣಗೊಂಡು 2 ವರ್ಷ ಕಳೆದರೂ ರೈತರಿಗೆ ಹಣ ಸಂದಾಯವಾಗಿಲ್ಲ ಎಂದು ದೂರಿ ಕಾಮಗಾರಿಯ ಹಣ ಪಾವತಿಗೆ ಪಟ್ಟು ಹಿಡಿದರು. ಗ್ರಾಪಂ ಕಾರ್ಯದರ್ಶಿಯಿಂದ ಸಮಂಜಸವಾದ ಉತ್ತರ ಬಾರದಿದ್ದರಿಂದ ಸದಸ್ಯರೂ ಸಭೆಯಿಂದ ಹೊರಬಂದರಿಂದ ರೊಚಿಗೆದ್ದ ಫಲಾನುಭವಿಗಳು ಕಚೇರಿಗೆ ಬೀಗ ಜಡಿದು ಹಣ ಪಾವತಿ ಆಗುವವರೆಗೂ ಬೀಗ ತೆರೆಯುವುದಿಲ್ಲವೆಂದು ಪಟ್ಟು ಹಿಡಿದರು.

2012-13 ನೇ ಸಾಲಿನ 172 ಮಂದಿಗೆ ಶೌಚಾಲಯದ ಸಪ್ಲೆ ಬಿಲ್‌ 1199 ರೂ. ಪಾವತಿ ಆಗಿಲ್ಲ. 2012-13 ನೇ ಸಾಲಿನ ಕೆಲವರಿಗೆ ಕಾಮಗಾರಿಯ ಹಣ ಬಂದಿಲ್ಲ.ಕೆಲ ಕಾಮಗಾರಿಗಳ ಎನ್ಎಂಆರ್ ಹಣ ಬಂದಿದೆಯಾದರೂ ಸರಕುಗಳ ಬಿಲ್ ಪಾವತಿಯಾಗಿಲ್ಲ. ಕೆಲ ಬೇಕಾದವರಿಗೆ ಪೂರ್ತಿ ಹಣ ಪಾವತಿಯಾಗಿದ್ದು ಹಣ ನೀಡುವಲ್ಲೂ ತಾರತಮ್ಯ ಮಾಡಲಾಗಿದೆ.ರೈತರ ಕಾಮಗಾರಿಗಳ ಹಣ ಮಂಜೂರಿಗೆ ಮಾತ್ರ ವಿಳಂಬ ಮಾಡುತ್ತಿದ್ದಾರೆ. ಅದರೆ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಮಾಡಿರುವ ಗುತ್ತಿಗೆದಾರರಿಗೆ ಹಣ ನೀಡಿದ್ದಾರೆ ಎಂದು ಕೆಲವರು ಆರೋಪಿಸಿದರು.

ಈ ಬಗ್ಗೆ ಸ್ಪಷ್ಟನೆ ನೀಡಿದ ಕಾರ್ಯದರ್ಶಿ ಜ್ಞಾನಮೂರ್ತಿ ಕಾಮಗಾರಿ ಬಿಲ್‌ ಆಧಾರ್‌ ಕಾರ್ಡ್‌ ಎಂಟ್ರಿ ಇಲ್ಲದವರಿಗೆ ಪಾವತಿಯಾಗಿಲ್ಲ ಉಳಿದವರಿಗೆ ಪಾವತಿಯಾಗಿದೆ. ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಗೆ ತೊಂದರೆ ಮಾಡಿಲ್ಲ ಎಂದರಾದರೂ ಇವರ ಉತ್ತರಕ್ಕೆ ಫ‌ಲಾನುಭವಿಗಳು ತೃಪ್ತರಾಗದೆ ಮೇಲಧಿಕಾರಿಗಳು ಬಂದು ಸ್ಪಷ್ಟ ಭರವಸೆ ನೀಡದ ವಿನಃ ಬೀಗ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.ಮುಖಂಡರಾದ ಎಂ.ಎಸ್.ಶಕ್ತಿಪ್ರಸಾದ್, ಜಿ.ಬಿ.ಪ್ರಕಾಶ್, ಜಿ.ಟಿ.ತಿಮ್ಮಯ್ಯ, ಪರಮೇಶ್, ಪುಟ್ಟರಾಜು ಇತರರು ಇದ್ದರು.
-------------
ಶುಕ್ರವಾರದಂದು ಉದ್ಯೋಗಖಾತ್ರಿ ಉಸ್ತುವಾರಿ ಅಧಿಕಾರಿ ರವೀಂದ್ರ ಗಾಣಧಾಳುವಿಗೆ ಭೇಟಿ ನೀಡಿ ಪ್ರತಿಭಟನ ನಿರತರೊಂದಿಗೆ ಸಮಾಲೋಚಿಸಿ ಎಲ್ಲರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರ ಮೇರೆಗೆ ಪ್ರತಿಭಟನೆ ಹಿಂಪಡೆಯಲಾಯಿತು.

-------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...