ವಿಷಯಕ್ಕೆ ಹೋಗಿ

ಬೋರನಕಣಿವೆ ಬಳಿ ರಾಜ್ಯಮಟ್ಟದ ಸಮಕಾಲೀನ ಶಿಲಾ ಶಿಲ್ಪಕಲಾ ಶಿಬಿರ

ನಾಡಿನ ವಿವಿಧ ಜಿಲ್ಲೆಗಳಿಂದ ಶಿಲ್ಪಿಗಳ ಆಗಮನ
------------------------------------------
ಜಾನಪದ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ರಾಜ್ಯಮಟ್ಟದ ಶಿಬಿರವೊಂದು ಬೋರನಕಣಿವೆಯಂತಹ ಕುಗ್ರಾಮದಲ್ಲಿ ಆಯೋಜಿಸಲಾಗಿದ್ದು ನಾಡಿನ ವಿವಿಧ ಜಿಲ್ಲೆಗಳಿಂದ ಶಿಲ್ಪಿಗಳು ಇಲ್ಲಿಗೆ ಆಗಮಿಸಿರುವುದು ಗ್ರಾಮೀಣಭಾಗದಲ್ಲೂ ಸಹ ಕಲೆಯ ಬೆಳವಣಿಗೆಗೆ ಸಹಕಾರಿಯಾಗಿದೆ.

ಹುಳಿಯಾರು ಸಮೀಪದ ಬೋರನಕಣಿವೆಯ ಸೇವಾಚೇತನ ಟ್ರಸ್ಟ್ ನ ಅಧ್ಯಕ್ಷ ಹಾಗೂ ಸಾಹಿತಿಗಳಾದ ಪ್ರೋ ಎಸ್.ಜಿ.ಸಿದ್ದರಾಮಯ್ಯ ಹಾಗೂ ಕಾರ್ಯದರ್ಶಿ ವಿಠಲ್ ಅವರ ಪ್ರಯತ್ನದ ಫಲವಾಗಿ ರಾಜ್ಯಮಟ್ಟದ ಎರಡುವಾರಗಳ ಕಾಲದ ಶಿಬಿರ ನಡೆಯುತ್ತಿದ್ದು ಇಲ್ಲಿ ಹಿರಿಯ ಕಿರಿಯ ಕಲಾವಿದರ ಉಳಿಯಿಂದ ಅನೇಕ ಅದ್ಭುತ ಕಲಾಕೃತಿಗಳು ಮೂಡುತ್ತಿದೆ.

ಕೆತ್ತನೆಯಲ್ಲಿ ತೊಡಗಿಕೊಂಡಿರುವ ಶಿಲ್ಪಿಗಳು

ಹಿರಿಯ ಶಿಲ್ಪಿಗಳಾಗಿರುವ ಚಿತ್ರದುರ್ಗ ಜಿಲ್ಲೆಯ ತುಪ್ಪದಹಳ್ಳಿಯ ಹಿರಿಯ ಶಿಲ್ಪಿ ಟಿ.ಎಂ.ತೀರ್ಥಾಚಾರ್ ಸಂಚಾಲಕತ್ವದ ಈ ಶಿಬಿರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಹತ್ತು ಮಂದಿ ಹಿರಿಯ ಶಿಲ್ಪಿಗಳು ಹಾಗೂ ಹತ್ತು ಮಂದಿ ಕಿರಿಯ ಶಿಲ್ಪಿಗಳು ಭಾಗವಹಿಸಿದ್ದು ನೆಲಮಂಗಲದ ಶಿಲ್ಪಿ ಎಸ್.ಮರಿಸ್ವಾಮಿ ಶಿಬಿರದ ನಿರ್ದೇಶಕರಾಗಿದ್ದಾರೆ.


ಕರ್ನಾಟಕ ಶಿಲ್ಪ ಕಲಾ ಅಕಾಡೆಮಿಯು ಹುಳಿಯಾರು ಹೋಬಳಿಯ ಬೋರನಕಣಿವೆಯ ಸೇವಾಚೇತನದಲ್ಲಿ ಅ.೧೯ರಿಂದ ನ.೨ ಎರಡು ವಾರಾವಧಿ ಶಿಲಾ ಶಿಲ್ಪಕಲಾ ಶಿಬಿರವನ್ನು ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಅವರು ಅ.೧೯ರಂದು ಶಿಬಿರಕ್ಕೆ ಚಾಲನೆ ನೀಡಿದ್ದು ನ.೨ ರಂದು ಸಮಾರೋಪ ಸಮಾರಂಭ ನಡೆಯಲಿದೆ.ಶಿಬಿರದ ಕೊನೆಯ ದಿನವಾದ ನ.೨ ರಂದು ಈ ಶಿಬಿರದಲ್ಲಿ ಶಿಲ್ಪಿಗಳು ನಿರ್ಮಿಸಿದ ಕಲಾಕೃತಿಗಳನ್ನು ನಿವೃತ್ತ ಜಿಲ್ಲಾಧಿಕಾರಿ ಎಸ್.ಆರ್.ವೆಂಕಟೇಶ್ ಲೋಕಾರ್ಪಣೆ ಮಾಡಲಿದ್ದಾರೆ.
ಶಿಲ್ಪಿಗಳ ಕೈಚಳಕದಿಂದ ಮೂಡಿಬರುತ್ತಿರುವ ಕಲಾಕೃತಿಗಳು

ಕರ್ನಾಟಕ ಶಿಲ್ಪಾಕಲಾ ಆಕಾಡೆಮಿ ನಾಡಿನ ನಾನಾ ಜಿಲ್ಲೆಗಳಿಂದ ಶಿಲ್ಪಿಗಳನ್ನು ಆಹ್ವಾನಿಸಿದ್ದು ಎಲ್ಲರು ನುರಿತ ಕಲಾವಿದರಾಗಿದ್ದಾರೆ.ಇಪ್ಪತ್ತು ಮಂದಿ ಶಿಲ್ಪಿಗಳಿಂದ ಅಂಬೇಡ್ಕರ್,ವಿವೇಕಾನಂದ,ಕುವೆಂಪು,
ಕನಕದಾಸ,ಬಾಪುಲೆ,ಸಾವಿತ್ರಿ ಬಾಪುಲೆ,ಅಬ್ದುಲ್ ಕಲಾಂ,ಧ್ಯಾನಮಗ್ನ ಗಾಂಧಿ,ನಾಲ್ವಡಿ ಕೃಷ್ಣರಾಜ ಒಡೆಯರ್,ಶರಣ ಬಸವೇಶ್ವರರ ಶಿಲ್ಪಗಳನ್ನು ಕೆತ್ತನೆ ಮಾಡಿಸಲಾಗುತ್ತಿದೆ.ಹಿರಿ ಕಿರಿಯ ಶಿಲ್ಪಿಗಳು ಕೃಷ್ಣ ಶಿಲೆಯಲ್ಲಿ ಕೆತ್ತನೆ ಮಾಡುತ್ತಿದ್ದು ಕಲಾಕೃತಿಗಳಾಗಿ ಅರಳುತ್ತಿರುವ ಇವುಗಳು ಬೆರಗುಮೂಡಿಸುತ್ತಿದೆ.

ಗೌರವ ಧನ:ಇಂತಹ ಶಿಬಿರಗಳನ್ನು ವರ್ಷಕ್ಕೆ ಎರಡುಮೂರು ಬಾರಿ ಆಯೋಜಿಸಲಾಗುವುದಿದ್ದು ಭಾಗವಹಿಸುವ ಶಿಲ್ಪಿಗಳಿಗೆ ಗೌರವ ಧನ ನೀಡಲಾಗುವುದು. ಹಿರಿಯ ಶಿಲ್ಪಿಗಳಿಗೆ ೩೦ ಸಾವಿರ ಹಾಗೂ ಕಿರಿಯ ಶಿಲ್ಪಿಗಳಿಗೆ ೨೫ ಸಾವಿರ ಗೌರವ ಧನದ ಜೊತೆಗೆ ಪ್ರಶಂಸ ಪತ್ರ ನೀಡಲಾಗುತ್ತದೆ.
ಹಿರಿಯ ಶಿಲ್ಪಿ ಟಿ.ಮಂಜಣ್ಣನ ಪ್ರಕಾರ ಕೆತ್ತನೆಗೆ ಬೇಕಾದ ಕೃಷ್ಣ ಶಿಲೆ ಮೈಸೂರು ಬಳಿಯ ಹೆಗ್ಗಡದೇವನ ಕೋಟೆಯಿಂದ ತರಬೇಕಿದ್ದು ಗಣಿಇಲಾಖೆಯ ಸಮಸ್ಯೆಯಿಂದಾಗಿ ಕಲ್ಲು ತರುವುದೆ ಕಷ್ಟಕರವಾಗಿದೆ.ಬೇರೆಲ್ಲೂ ಇಂತಹ ಕಲ್ಲು ಲಭ್ಯವಿಲ್ಲದೆ ಕೆತ್ತನೆ ಕಾರ್ಯಕ್ಕೆ ತೊಡಕುಂಟಾಗುತ್ತಿದೆ.ಸರ್ಕಾರ ಈ ನಿಟ್ಟಿನಲ್ಲಿ ಆಲೋಚಿಸಬೇಕಾದ ಅಗತ್ಯವಿದೆ ಎನ್ನುತ್ತಾರೆ.


ಕಡೆಗಣನೆ:ಕಲೆಗೆ ಪ್ರೋತ್ಸಾಹ ಕಡಿಮೆಯಾಗುತ್ತಿದ್ದು ಶಿಲ್ಪಿಗಳ ಜೀವನ ದುಸ್ತರವಾಗುತ್ತಿದೆ.ನಮ್ಮನ್ನು ಗುರ್ತಿಸಿ ಗೌರವಿಸುವುದು ದೂರದ ಮಾತು. ಪ್ರಶಸ್ತಿಗೆ ಪರಿಗಣಿಸಬೇಕಾದರೆ ಅರ್ಹತೆಯೆ ಮಾನದಂಡವಾಗಬೇಕೆ ಹೊರತು ವಶೀಲಿಬಾಜಿಯಲ್ಲ.ಪ್ರಶಸ್ತಿ ನೀಡುವಲ್ಲೂ ರಾಜಕೀಯ ನಡೆಯುತ್ತಿದ್ದು ಅರ್ಹರಿಗೆ ಪ್ರಶಸ್ತಿ ನೀಡಬೇಕು.ಇಲ್ಲದಿದ್ದಲ್ಲಿ ಪ್ರಶಸ್ತಿಯ ಮೌಲ್ಯ ಕಳೆದುಕೊಳ್ಳುತ್ತದೆ ಎಂಬ ನೋವಿನ ಮಾತು ಕಲಾವಿದರಿಂದ ಕೇಳಿಬಂತು.
ಕಿರಿಯ ಶಿಲ್ಪಿಗಳಿಗೆ ಮಾರ್ಗದರ್ಶನ ನೀಡುತ್ತಿರುವ ಹಿರಿಯ ಶಿಲ್ಪಿಗಳು


ಪ್ರಸ್ತುತ ಸನ್ನಿವೇಶದಲ್ಲಿ ಶಿಲ್ಪಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವವರು ಇಲ್ಲವಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ಕಲಾವಿದರನ್ನು ಗುರ್ತಿಸಿ ಬೆಳಸುವ ನಿಟ್ಟಿನಲ್ಲಿ ಇಂತಹ ಶಿಬಿರಗಳು ಅವಶ್ಯವಾಗುತ್ತಿದ್ದು ಅಕಾಡೆಮಿ ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.
-------------------------------------------------
ಕಲೆಯ ದೃಷ್ಟಿಯಲ್ಲಿ ಇದೊಂದು ಉತ್ತಮ ವೇದಿಕೆಯಾಗಿದ್ದು ಕಲೆಯ ಉಳಿವು ಹಾಗೂ ಬೆಳವಣಿಗೆಗೆ ಇಂಥ ಶಿಬಿರಗಳು ಪ್ರಯೋಜನಕಾರಿಯಾಗಿದ್ದು ಕಿರಿಯ ಕಲಾವಿದರಿಗೆ ಉತ್ತಮ ಅವಕಾಶ ಕಲ್ಪಿಸಿದಂತಾಗುತ್ತುದೆ.ಈ ಶಿಬಿರದಲ್ಲಿ ಭಾಗವಹಿಸುವುದರಿಂದ ಎಲ್ಲಾರೀತಿಯ ಶಿಲ್ಪಿಗಳ ಕಲಾರಚನೆ ಅಭ್ಯಸಿಸಲು ಅನುಕೂಲವಾಗುತ್ತದೆ.ಕಾರ್ಕಳದಲ್ಲಿ ಶಿಲ್ಪಕಲೆ ಬಗ್ಗೆ ನಾನು ಕಲಿತಿದ್ದು ಇಂತಹ ಶಿಬಿರಗಳಲ್ಲಿ ಭಾಗವಹಿಸುವುದು ನಮ್ಮ ಬೆಳವಣಿಗೆಗೆ ಪೂರಕವಾಗುತ್ತದೆ: ಶಿಲ್ಪಿ ಮಹಾದೇವ್,ಬಾದಾಮಿ

--------------------------------------- 

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.