ವಿಷಯಕ್ಕೆ ಹೋಗಿ

ಹುಳಿಯಾರು:ಬನಶಂಕರಿ ದೇವಾಲಯದಲ್ಲಿ ಸಂಭ್ರಮದ ಬನದ ಹುಣ್ಣಿಮೆ

ಹುಳಿಯಾರು: ದೇವಾಂಗ ಮಂಡಳಿ, ಬನದ ಹುಣ್ಣಿಮೆ ದೇವಾಂಗ ಯುವಕ ಸಂಘ, ಬನಶಂಕರಿ ದೇವಸ್ಥಾನ ಸಮಿತಿವತಿಯಿಂದ ೫ ನೇ ವರ್ಷದ ಬನದ ಹುಣ್ಣಿಮೆ ಕಾರ್ಯಕ್ರಮವು ಪಟ್ಟಣದ ಬನಶಂಕರಿ ಅಮ್ಮನವರ ದೇವಾಲಯದಲ್ಲಿ ಅಪಾರ ಭಕ್ತರ ಸಮ್ಮುಖದಲ್ಲಿ ಅಮ್ಮನವರಿಗೆ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ನಡೆಯಿತು.
ಹುಳಿಯಾರಿನ ಬನಶಂಕರಿ ದೇವಾಲಯದಲ್ಲಿ ಬನದಹುಣ್ಣಿಮೆ ಅಂಗವಾಗಿ ಭಜನಾಮಂಡಳಿಯಿಂದ ಭಜನೆ ನಡೆಯಿತು.

        ಪುಷ್ಯಮಾಸದ ಹುಣ್ಣಿಮೆಯನ್ನು ಬನದ ಹುಣ್ಣಿಮೆ ಅಥವಾ ಬನಶಂಕರಿ ಹುಣ್ಣಿಮೆ ಎನ್ನಲಾಗುವುದಿದ್ದು ಪೂರ್ಣಾನಂದ ಪ್ರದಾಯಕಳಾದ ಬನಶಂಕರಿ ದೇವಿಯು ನಾಡಿಗೆ ಸುಭೀಕ್ಷೆ ಹಾಗೂ ಜೀವರಾಶಿಗಳಿಗೆ ಸಮೃದ್ಧಿಯನ್ನು ಪಾಲಿಸಿದ ಪ್ರತೀಕವಾಗಿ ಬನದ ಹುಣ್ಣಿಮೆ ಆಚರಿಸಲಾಗುತ್ತದೆ.

            ಭಾನುವಾರ ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಪಂಚದ್ರವ್ಯಗಳಿಂದ ಅಮ್ಮನವರಿಗೆ ಅಭಿಷೇಕ ನಡೆದು ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ಮಧ್ಯಾಹ್ನ ಮುತ್ತೈದೆಯರಿಗೆ ಹಾಗೂ ಕನ್ನಿಕೆಗೆ ಬಾಗಿನ ಕೊಟ್ಟು, ಅಮ್ಮನವರಿಗೆ ಆರತಿ ಸೇವೆ, ಮಡಿಲಕ್ಕಿ ಸೇವೆ ನಡೆಯಿತು.ಆಗಮಿಸಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.ಸಂಜೆ ವಿವಿಧ ಭಜನಾ ಮಂಡಳಿಯಿಂದ ಭಜನೆ,ಸೌಂದರ್ಯ ಲಹರಿ ಪಠಣ ಹಾಗೂ ಉಯ್ಯಾಲೋತ್ಸವ ನಡೆಯಿತು.

                    ಈ ಸಂದರ್ಭದಲ್ಲಿ ಬನದಹುಣ್ಣಿಮೆ ಸಂಘದ ಅಧ್ಯಕ್ಷ ನವೀನ್ ಕುಮಾರ್, ಶಂಕರ್, ದೇವಾಂಗ ಮಂಡಳಿಯ ಅನಂತಕುಮಾರ್,ದಾಸಪ್ಪ,ಪುಟ್ಟರಾಜು, ಲೋಕೇಶ್, ಕೇಶವ ಮೂರ್ತಿ, ಕಲಾವಿದ ಗೌಡಿ ಸೇರಿದಂತೆ ದೇವಾಂಗ ಸಮುದಾಯದವರು ಉಪಸ್ಥಿತರಿದ್ದರು.

                  ಕಾಮಶೆಟ್ಟಿಪಾಳ್ಯದಲ್ಲಿ ಬನಹುಣಿಮೆ ಪ್ರಯುಕ್ತ ಶ್ರೀರುದ್ರ ಚಂಡಿಕಾ ದುರ್ಗಾಹೋಮ ನಡೆದು ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.


                ಪಟ್ಟಣದ ಬಸ್ ಏಜೆಂಟ್ ಲೋಕೇಶಣ್ಣನವರ ಮನೆಯಲ್ಲಿ ಬನಶಂಕರಿ ಅಮ್ಮನವರ ಅಷ್ಟಾವಧಾನ ಸೇವೆ,ಪಂಚಾಮೃತ ಸೇವೆ ನಡೆದು ಅನ್ನಸಂತರ್ಪಣೆ ನಡೆಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...