ಕಾಂಗ್ರೆಸ್ ಪಕ್ಷ ಹುಳಿಯಾರು ಸೇರಿದಂತೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸ
----------------------------------------------------
ಹುಳಿಯಾರು:ಹುಳಿಯಾರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ಅಭ್ಯರ್ಥಿ ವೈ.ಸಿ.ಸಿದ್ರಾಮಯ್ಯ ಹಾಗೂ ತಾಲ್ಲೂಕು ಪಂಚಾಯತ್ ಅಭ್ಯರ್ಥಿ ಕಿರಣ್‌ಕುಮಾರ್ ಪರ ತುಮಕೂರು ಸಂಸದ ಮುದ್ದಹನುಮೇಗೌಡ ಮತ್ತು ಕಾಂಗ್ರೆಸ್ ಮುಖಂಡ ಸಾಸಲು ಸತೀಶ್ ಬುಧವಾರ ಸಂಜೆ ರೋಡ್‌ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.
ಕಾಂಗ್ರೆಸ್ ಸಾಧನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಮುದ್ದಹನುಮೇಗೌಡ ಹಾಗೂ ಕಾಂಗ್ರೆಸ್ ಮುಖಂಡ ಸಾಸಲು ಸತೀಶ್ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರವು ಕಳೆದ ಎರಡೂವರೆ ವರ್ಷಗಳಿಂದ ಅನ್ನಭಾಗ್ಯ ,ಕ್ಷೀರಭಾಗ್ಯ , ಶಾದಿಭಾಗ್ಯ, ಕೃಷಿ ಭಾಗ್ಯ, ಹೀಗೆ ಹತ್ತು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಿದೆ ಎಂದರು.
ಹುಳಿಯಾರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜಿಪಂ ಅಭ್ಯರ್ಥಿ ವೈ.ಸಿ.ಸಿದ್ರಾಮಯ್ಯ ಹಾಗೂ ತಾಪಂ ಅಭ್ಯರ್ಥಿ ಕಿರಣ್‌ಕುಮಾರ್ ಪರವಾಗಿ ಸಂಸದ ಸಂಸದ ಮುದ್ದಹನುಮೇಗೌಡ ಮತ್ತು ಕಾಂಗ್ರೆಸ್ ಮುಖಂಡ ಸಾಸಲು ಸತೀಶ್ ಕಾರ್ಯಕರ್ತರೊಂದಿಗೆ ಪಟ್ಟಣದಲ್ಲಿ ರೋಡ್ ಶೋ |
ಹುಳಿಯಾರು ಜಿಲ್ಲಾ ಪಂಚಾಯತ್ ಕ್ಷೇತ್ರ ಪ್ರತಿಷ್ಠಿತ ಕ್ಷೇತ್ರವಾಗಿದ್ದು ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹುಳಿಯಾರು ಸೇರಿದಂತೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದರು.
ಈ ಕ್ಷೇತ್ರದಿಂದ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸಿದ್ದೇ ಆದಲ್ಲಿ ನಾನು ಹಾಗೂ ನಮ್ಮ ಪಕ್ಷದ ಮುಖಂಡರುಗಳು ಒಗ್ಗಟ್ಟಾಗಿ ಈ ಭಾಗದ ಸರ್ವತೋಮುಖ ಅಭಿವೃದ್ಧಿ ನಡೆಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಮುಖ್ಯಮಂತ್ರಿಗಳು ಹುಳಿಯಾರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಭಾಗದ ಜನರು ಮಾಡಿದ್ದ ಮನವಿಯಂತೆ ಹುಳಿಯಾರು ಗ್ರಾಪಂ ಅನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೇಗೆರಿಸಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು ಚುನಾವಣೆ ಮುಗಿದ ತಕ್ಷಣ ಘೋಷಣೆಯಾಗಿಲಿದೆ ಎಂದರು.
ಪಟ್ಟಣದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನ ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯಸರಕಾರದಿಂದ ಹಾಗೂ ಸಂಸದರ ನಿಧಿಯಿಂದಲೂ ಸಹ ಮತ್ತಷ್ಟು ಶುದ್ದ ಕುಡಿಯುವ ನೀರಿನ ಘಟಕವನ್ನ ನಿರ್ಮಿಸಿ ಇಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನ ಬಗೆಹರಿಸುವುದಾಗಿ ಭರವಸೆಯಿತ್ತರು.
ಚಿ.ನಾ.ಹಳ್ಳಿ ವಿಧಾನ ಸಭಾ ಕ್ಷೇತ್ರದ ಕುಡಿಯುವ ನೀರಿನ ಯೋಜನೆಯಾದ ಹೇಮಾವತಿ ನದಿ ಕಾಲುವೇ ಕಾಮಗಾರಿ ಕುಂಠಿತಗೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಈಗಾಗಲೆ ಅಧಿಕಾರಿಗಳ ಸಭೆಯನ್ನು ನಡೆಸಿದ್ದು ಭೂಮಿ ನೀಡಿರುವ ರೈತರಿಗೆ ಶೀಘ್ರವಾಗಿ ಪರಿಹಾರ ನೀಡಿ ತ್ವರಿತವಾಗಿ ಕಾಮಗಾರಿ ಮುಗಿಸಲು ಸೂಚಿಸಿರುವುದಾಗಿ ತಿಳಿಸಿದರು.
ಕಾಂಗ್ರೆಸ್ ಪಕ್ಷದ ಸರ್ಕಾರ ಪ್ರತಿಯೊಂದು ಜನಂಗಕ್ಕೂ ಸಾಮಾಜಿಕ ನ್ಯಾಯವನ್ನು ನೀಡುತ್ತ ಬಂದಿದ್ದು ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೆಚ್ಚಿನ ಮತವನ್ನ ನೀಡಿ ಕಾಂಗ್ರೆಸ್ ಪಕ್ಷವು ಅಧಿಕಾರದಚುಕ್ಕಾಣಿ ಹಿಡಿಯುವಂತೆ ಮಾಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಲಕ್ಕಪ್ಪ, ಗ್ರಾ.ಪಂ.ಸದಸ್ಯರುಗಳಾದ ಧನುಷ್‌ರಂಗನಾಥ್, ಎಸ್.ಆರ್.ಎಸ್ ದಯಾನಂದ್, ಹೆಚ್.ಆರ್.ವೆಂಕಟೇಶ್, ವಕೀಲ ರಮೇಶ್‌ಬಾಬು, ವೈ.ಆರ್.ಮಲ್ಲಿಕಾರ್ಜುನಯ್ಯ, ಕೆ.ಎಂ.ಎಲ್ ನರಸಿಂಹಮೂರ್ತಿ,ನಾಗಣ್ಣ,ರಹಮತುಲ್ಲಾ,ಈರುಳ್ಳಿ ಮಂಜು ಸೇರಿದಂತೆ ಸಾಕಷ್ಟು ಕಾರ್ಯಕರ್ತರು ಭಾಗವಹಿಸಿದ್ದರು
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ