ಹುಳಿಯಾರು -ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಯಾವುದೇ ಸಮಸ್ಯೆಗಳಿಲ್ಲದೆ ಸುಸೂತ್ರವಾಗಿ ನಡೆದಿದೆ.ಇಂದು ನಾಲ್ಕನೇ ದಿನವಾಗಿದ್ದು ಬುಧವಾರದಂದು ನಡೆದ ಅರ್ಥ ಶಾಸ್ತ್ರ ಪರೀಕ್ಷೆಗೆ ೫೫೯ ವಿದ್ಯಾರ್ಥಿಗಳ ಪೈಕಿ ೩೫ ಮಂದಿ ಗೈರಾಗಿ ೫೨೪ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ತಾಲ್ಲೂಕಿನಲ್ಲಿ ಹುಳಿಯಾರು ಹಾಗೂ ಚಿಕ್ಕನಾಯಕನಹಳ್ಳಿಯಲ್ಲಿ ಮಾತ್ರವೇ ಪರೀಕ್ಷಾ ಕೆಂದ್ರಗಳಾಗಿದ್ದು ಹುಳಿಯಾರಿನ ಕೇಂದ್ರಕ್ಕೆ ಬೋರನಕಣಿವೆ ಕಾಲೇಜು,ದೊಡ್ಡ ಎಣ್ಣೆಗೆರೆ ಕಾಲೇಜು,ಬರಗೂರು-ಬೆಳಗುಲಿ ಕಾಲೇಜು,ಹುಳಿಯಾರಿನ ಕನಕದಾಸ ಹಾಗೂ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಸೇರಿದಂತೆ ಒಟ್ಟು ಆರು ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆಗಮಿಸುತ್ತಿದ್ದಾರೆ.
ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿದ್ದು ನಕಲು ನಡೆಯದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು.ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಒದಗಿಸಲಾಗಿತ್ತು.ನಕಲು ತಡೆಗಟ್ಟಲು ೩ ಜನರ ವಿಶೇಷ ಜಾಗೃತದಳ ಕೂಡ ಕಾರ್ಯನಿರ್ವಹಿಸುತ್ತಿದ್ದು ಇದುವರೆಗೂ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವ ಅಥವಾ ವಿದ್ಯಾರ್ಥಿಗಳು ಡಿಬಾರ್ ಆಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ.
ಇಂದು ನಡೆದ ಅರ್ಥಶಾಸ್ತ್ರ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳು ಉತ್ತಮವಾಗಿ ಬರೆದಿರುವ ವಿಶ್ವಾಸ ವ್ಯಕ್ತಪಡಿಸಿದ್ದು ಹಾಗೂ ಉಪನ್ಯಾಸಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ