ಹುಳಿಯಾರು: ವೇತನ ತಾರತಮ್ಯ ನಿವಾರಣೆ ಮತ್ತು ಕುಮಾರ ನಾಯಕ್ ವರದಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಹುಳಿಯಾರು-ಕೆಂಕೆರೆ ಪದವಿಪೂರ್ವ ಕಾಲೇಜಿನ ಪರೀಕ್ಷಾಕೇಂದ್ರದಲ್ಲಿ ಪ್ರಾಂಶುಪಾಲರು ಮತ್ತು ಎಲ್ಲಾ ಕಾಲೇಜುಗಳ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷಾ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟಿಸಿದರು.
ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಹುಳಿಯಾರು-ಕೆಂಕೆರೆ ಪದವಿಪೂರ್ವ ಕಾಲೇಜಿನ ಪರೀಕ್ಷಾಕೇಂದ್ರದಲ್ಲಿ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷಾ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟಿಸಿದರು. |
ಪ.ಪೂ ಶಿಕ್ಷಣ ಇಲಾಖೆಯ ಉಪನ್ಯಾಸಕರು,ಪ್ರಾಂಶುಪಾಲರು ವೇತನ ತಾರತಮ್ಯ ನೀತಿ ವಿರುದ್ಧ ಹಲವು ವರ್ಷಗಳಿಂದಲೂ ಸರ್ಕಾರದ ಗಮನ ಸೆಳೆಯುತ್ತಿದ್ದರೂ ಪ್ರಯೋಜನವಾಗಿಲ್ಲ.ಉಪನ್ಯಾಸಕರ ಬಗ್ಗೆ ಸರ್ಕಾರ ನಿರ್ಲಕ್ಷ್ಯವಹಿಸಿದೆ.ಈ ಹಿನ್ನಲೆಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಕೇಂದ್ರ, ರಾಜ್ಯ ಸರ್ಕಾರಿ ನೌಕರರ ವೇತನ ತಾರತಮ್ಯತೆಯನ್ನು ಸರಿಪಡಿಸಬೇಕು ಎಂದು ಸರ್ಕಾರದ ವಿರುದ್ಧ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಕೈಗೆ ಕಪ್ಪುಪಟ್ಟಿಯನ್ನು ಕಟ್ಟಿಕೊಂಡೇ ಕರ್ತವ್ಯ ನಿರ್ವಹಿಸಿದರು.
ಸರ್ಕಾರವು ವೇತನ ತಾರತಮ್ಯ ನೀತಿಯನ್ನು ಸರಿಪಡಿಸದಿದ್ದರೆ ಮುಂಬರುವ ಪರೀಕ್ಷಾ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ಸ್ಥಗಿತಗೊಳಿಸಲಾಗುವುದೆಂದರು ಉಪನ್ಯಾಸಕರಾದ ಕೆ.ಅನಂತಯ್ಯ, ವಿ.ಹೆಚ್.ರೇವಣ್ಣ,ನಾರಾಯಣ್ ಮತ್ತಿತರರು ಎಚ್ಚರಿಕೆ ನೀಡಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ