ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣ
---------------------
ಹುಳಿಯಾರು:ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಹೆಚ್ಚಿಸಲು ಹಾಗೂ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನಗಳು ಅಗತ್ಯವಾಗಿದ್ದು ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ವಿಜ್ಞಾನ ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಆಸಕ್ತಿವಹಿಸಿ ಆ ಬಗ್ಗೆ ಮಾಹಿತಿ ಕಲೆಹಾಕಿದಾಗ ಅವರು ಪರಿಪೂರ್ಣ ವಿದ್ಯಾರ್ಥಿಗಳಾಗಲು ಸಾಧ್ಯ ಎಂದು ಕಾರ್ಯದರ್ಶಿ ಟಿ.ಎಸ್.ರಾಮನಾಥ್ ನುಡಿದರು.
ಹುಳಿಯಾರು ವಾಸವಿ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಗ್ನಿ ಪರ್ವತದಲ್ಲಿ ಲಾವಾರಸ ಹೊರಹೊಮ್ಮುವ ಬಗ್ಗೆ ಪ್ರಾತ್ಯಕ್ಷಿಕೆ ಮಾಡಿ ತೋರಿಸುತ್ತಿರುವ ಮಕ್ಕಳು |
ಪಟ್ಟಣದ ವಾಸವಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಶಾಲಾ ಮಕ್ಕಳು ಸೋಮವಾರದಂದು ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರೌಢಶಾಲಾ ವಿದ್ಯಾರ್ಥಿಗಳು ವಿಜ್ಞಾನ,ಪರಿಸರ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ೧೨೦ ಮಾದರಿಗಳನ್ನು ಪ್ರದರ್ಶಿಸಿದರು.ವಿದ್ಯಾರ್ಥಿಗಳು ತಾವು ತಯಾರಿಸಿರುವ ಮಾದರಿ ಅದರ ಉದ್ದೇಶ ಮತ್ತು ಅದರ ಪ್ರಾತ್ಯಕ್ಷಿಕೆ ಮಾಡಿ ತೋರಿಸಿದರು.
ಭೌತಶಾಸ್ತ್ರಕ್ಕೆ ಸಂಬಂಧಿಸಿದಂತೆ ಪ್ರದರ್ಶಿಸಿದ ಹಲವು ಮಾದರಿಗಳು ವಿದ್ಯಾರ್ಥಿಗಳ ಜ್ಞಾನ ವೃದ್ಧಿಸುವಂತಿದ್ದವು.ವಿಜ್ಞಾನ ಶಿಕ್ಷಕ ಪದ್ಮಾಕರ್,ಪುಷ್ಪಲತಾ,ಕೆ.ನಾಗರಾಜು,ವಿ.ಲೋಕೇಶ್,ಡಿ.ರಂಗನಾಥ್ ಅವರು ಮಾರ್ಗದರ್ಶಕರಾಗಿದ್ದರು.
ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸರಸ್ವತಿ ಪೂಜೆ ಕೂಡ ನೆರವೇರಿತು.
ಈ ಸಂದರ್ಭದಲ್ಲಿ ವಾಸವಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಟಿ.ಎಸ್.ಲಕ್ಷ್ಮೀಕಾಂತ್,ಮೇಲ್ವಿಚಾರಕ ಶ್ರೀನಿವಾಸ್,ಗ್ರಾಪಂ ಸದಸ್ಯ ದಸೂಡಿ ಚಂದ್ರಣ್ಣ,ಮುಖ್ಯ ಶಿಕ್ಷಕ ಡಿ.ಮಹೇಶ್, ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ