ವಿಷಯಕ್ಕೆ ಹೋಗಿ

ಇಂದಿನಿಂದ ಕಂದಿಕೆರೆ ಶ್ರೀ ಗುರು ರೇವಣಸಿದ್ದೇಶ್ವರ ಶಿಲಾ ಪ್ರತಿಷ್ಠಾಪನಾ ಮಹೋತ್ಸವ

ತಾಲ್ಲೂಕಿನ ಕಂದಿಕೆರೆಯ ಶ್ರೀ ಗುರು ರೇವಣಸಿದ್ದೇಶ್ವರ ಶಿಲಾ ಪ್ರತಿಷ್ಠಾಪನಾ, ಹಾಲುಮತ ಸಂಸ್ಕೃತಿಗಳ ಉತ್ಸವ ಮತ್ತು ಶ್ರೀ ಗುರು ರೇವಣಸಿದ್ದೇಶ್ವರ ಸಾರ್ವಜನಿಕ ಸಮುದಾಯ ಭವನದ ಉದ್ಘಾಟನೆ ಇದೇ ತಿಂಗಳ ಮಾರ್ಚ್ ೧೬ರಿಂದ ೧೮ರವರೆಗೆ ನಡೆಯಲಿದೆ.

        ಶ್ರೀ ಗುರುರೇವಣಸಿದ್ದೇಶ್ವರ ಸ್ವಾಮಿ ಶ್ರೀ ಗುರುಮಠದಲ್ಲಿ ಕಾರ್ಯಕ್ರಮ ನಡೆಯಲಿದ್ದು ಮಾರ್ಚ್ ೧೬ರಂದು ಹೊಸದುರ್ಗ ಕಾಗಿನೆಲೆ ಗುರುಪೀಠದ ಈಶ್ವರಾನಂದಪುರಿಸ್ವಾಮಿ ದಿವ್ಯಸಾನಿದ್ಯದಲ್ಲಿ ಗುರುರೇವಣಸಿದ್ದೇಶ್ವರರು ಶ್ರೀ ದಶರಥರಾಮೇಶ್ವರ ಪುಣ್ಯಕ್ಷೇತ್ರದಲ್ಲಿ ಗಂಗಾಸ್ನಾನ ,ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸುವ ದೇವರುಗಳ ಉತ್ಸವ ನಡೆಯಲಿದೆ ಹಾಗೂ ಹೋಮ ಹವನಗಳು ನಡೆಯಲಿದೆ.

೧೭ರ ಗುರುವಾರದಂದು ಶ್ರೀ ಗುರು ರೇವಣಸಿದ್ದೇಶ್ವರ ಸಾರ್ವಜನಿಕ ಸಮುದಾಯ ಭವನದ ಉದ್ಘಾಟನೆ ನೆರವೇರಲಿದ್ದು ಹಾವೇರಿ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಕೆ.ಆರ್.ನಗರ ಕನಕ ಗುರುಪೀಠದ ಶಾಖಾಮಠದ ಶಿವಾನಂದಪುರಿ ಸ್ವಾಮೀಜಿ, ದೇವದುರ್ಗ ಕನಕ ಗುರುಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ದಿವ್ಯ ಸಾನಿದ್ಯ ವಹಿಸುವರು.

                ಸಚಿವ ಟಿ.ಬಿ.ಜಯಜಂದ್ರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು ಶಾಸಕ ಸಿ.ಬಿ.ಸುರೇಶ್‌ಬಾಬು ಅಧ್ಯಕ್ಷತೆ ವಹಿಸುವರು. ಸಂಸದ ಎಸ್.ಪಿ.ಮುದ್ದಹನುಮೇಗೌಡ ದಾನಿಗಳ ನಾಮಫಲಕ ಅನಾವರಣಗೊಳಿಸುವರು. ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಮಾಜಿ ಸಂಸದ ಜಿ.ಎಸ್.ಬಸವರಾಜು, ಎಂ.ಎಲ್.ಸಿ ಹೆಚ್.ಎಂ.ರೇವಣ್ಣ, ವಿ.ಎಸ್.ಉಗ್ರಪ್ಪ, ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜು, ಮಾಜಿ ವಿ.ಪ.ಸದಸ್ಯ ಡಾ.ಹುಲಿನಾಯ್ಕರ್, ಜಿ.ಪಂ.ಸದಸ್ಯರಾದ ಕೆ.ಆರ್.ಮಹೇಶ್‌ಒಡೆಯರ್, ವೈ.ಸಿ.ಸಿದ್ದರಾಮಯ್ಯ ಮತ್ತಿತರರು ಉಪಸ್ಥಿತರಿರುವರು.


           ೧೮ರಂದು ಶ್ರೀ ಗುರುರೇವಣಸಿದ್ದೇಶ್ವರರ ಪ್ರತಿಷ್ಠಾಪನೆ,ಪೂರ್ಣಾಹುತಿ, ಹೋಮ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ ಮತ್ತು ಮಧ್ಯಾಹ್ನ ೨ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು ಕನಕ ಗುರುಪೀಠದ ಸ್ವಾಮೀಜಿಗಳಾದ ನಿರಂಜನಾನಂದಪುರಿ ಸ್ವಾಮಜಿ, ಈಶ್ವರಾನಂದಪುರಿ ಸ್ವಾಮೀಜಿ, ಶಿವಾನಂದಪುರಿಸ್ವಾಮೀಜಿ, ಸಿದ್ದರಾಮನಂದಪುರಿ ಸ್ವಾಮೀಜಿ, ಕುಪ್ಪೂರು ಗದ್ದಿಗೆ ಮಠದ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ, ತಮ್ಮಡಿಹಳ್ಳಿ ಮಠದ ಡಾ.ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ, ಗೋಡೆಕೆರೆ ಮಠದ ಮೃತ್ಯುಂಜಯದೇಶೀಕೇಂದ್ರ ಸ್ವಾಮೀಜಿ, ಸಿದ್ದರಾಮದೇಶೀಕೇಂದ್ರ ಸ್ವಾಮೀಜಿ ದಿವ್ಯ ಸಾನಿದ್ಯ ವಹಿಸುವರು. ಶಾಸಕ ಸಿ.ಬಿ.ಸುರೇಶ್‌ಬಾಬು ಉಪಸ್ಥಿತರಿರುವರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ ​ ಹುಳಿಯಾರು : ಸಮೀಪದ ಬೋರನಕಣಿವೆಯ ಸಾಯಿಧಾಮದಲ್ಲಿ ಶ್ರೀ ಶಿರಡಿ ಸಾಯಿಬಾಬಾ ಇಂಟರ್ ನ್ಯಾಷನಲ್ ಸರ್ವೀಸ್ ಫೌಂಡೇಷನ್ ಹಾಗೂ ಸೇವಾ ಚೇತನ ವತಿಯಿಂದ ಭಾನುವಾರ ' ನರ್ಮದೋದ್ಭವ ಕಣಿವೆ ಶಂಕರನ' ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಅತ್ಯಂತ ಸಡಗರದಿಂದ ನೆರವೇರಿತು. ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಪಾಲ್ಗೊಂಡು ಶತ ನದಿಗಳ ಆವರಣ ಪೂಜೆಯನ್ನು ನೆರವೇರಿಸಿದರು.  ಬಳಿಕ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, "ದೇವಸ್ಥಾನಗಳ ಸ್ಥಾಪನೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸುತ್ತದೆ. ಶಿವನು ನಾಡಿನ ಜನತೆಗೆ ಉತ್ತಮ ಆರೋಗ್ಯ, ಸುಬುದ್ಧಿ ಹಾಗೂ ಐಶ್ವರ್ಯವನ್ನು ಕರುಣಿಸಲಿ" ಎಂದು ಹಾರೈಸಿದರು. ​ಇದೇ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಕಣಿವೆ ಶಂಕರನ ದರ್ಶನ ಪಡೆದರು.  ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಗ್ರಾಮಗಳ  ಭಕ್ತರು ಪಾಲ್ಗೊಂಡು ಪುನೀತರಾದರು.