ಹುಳಿಯಾರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ರೈತರ ಮೇಲಿನ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪುಟ್ಟಣ್ಣಯ್ಯ ಬಣದ ತಾಲ್ಲೂಕ್ ಹಾಗೂ ಹುಳಿಯಾರು ಹೋಬಳಿ ಕಾರ್ಯಕರ್ತರು ಭಾನುವಾರದಂದು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿನಲ್ಲಿ ನಡೆದ ರೈತರ ಮೇಲಿನ ಹಲ್ಲೆಯನ್ನು ಖಂಡಿಸಿ ರೈತ ಸಂಘದ ಪುಟ್ಟಣ್ಣಯ್ಯ ಬಣದ ಹುಳಿಯಾರು ಹೋಬಳಿ ಕಾರ್ಯಕರ್ತರು ಭಾನುವಾರದಂದು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. |
ಈ ವೇಳೆ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ಚಂದ್ರಪ್ಪ ನೀರು ಕೇಳಲು ಬೆಂಗಳೂರಿಗೆ ಬಂದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ ಎಂದರು. ರೈತರ ಮೇಲೆ ನಡೆದ ಹಲ್ಲೆಯ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ರೈತರ ಸಮಸ್ಯೆಗಳನ್ನು ಈಡೇರಿಸಲು ವಿಫಲವಾಗಿರುವ ಸರ್ಕಾರ ಹಗರಣಗಳಲ್ಲಿ ಸಿಲುಕಿ ನರಳುತ್ತಿದೆ. ರೈತರ ಮೇಲೆ ಪೊಲೀಸರ ದೌರ್ಜನ್ಯ ಇದೇರೀತಿ ಮುಂದುವರಿದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಹಿಳಾ ಘಟಕದ ತಾಲ್ಲೂಕ್ ಅಧ್ಯಕ್ಷೆ ಜಯಮ್ಮ ಮಾತನಾಡಿ ಪೊಲೀಸರ ಮೂಲಕ ರಾಜ್ಯ ಸರ್ಕಾರ ಅನ್ನದಾತರ ಮೇಲೆ ದೌರ್ಜನ್ಯ ಎಸಗಿ ಅವಮಾನಿಸಿದೆ. ಅನ್ನದಾತರ ಮೇಲೆ ಅಮಾನುಷವಾಗಿ ನಡೆದುಕೊಂಡಿರುವ ಸರ್ಕಾರ ಕೂಡಲೇ ರೈತರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಗ್ರಾಪಂ ಸದಸ್ಯ ಶಂಕರ್,ಗುಜುರಿ ನಾಗಣ್ಣ ಸೇರಿದಂತೆ ರೈತ ಸಂಘದ ಗ್ರಾಮ ಘಟಕದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ