ಚಿಕ್ಕನಾಯಕನಹಳ್ಳಿ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ ಕೃಷಿಗೆ ಸಂಬಂಧಿಸಿದಂತೆ ಯಾರೇ ಸಾಲ ಪಡೆದು ಸುಸ್ತಿದಾರರಾಗಿದ್ದರೂ, ಅವರು ೨೦೧೬ರ ಮಾರ್ಚ್ ೩೧ರೊಳಗೆ ಅಸಲು ಪಾವತಿಸಿದಲ್ಲಿ ರಾಜ್ಯ ಸರ್ಕಾರದ ಬಡ್ಡಿ ಮನ್ನಾ ಯೋಜನೆ ಅನ್ವಯಿಸುತ್ತದೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹೆಚ್.ಆರ್.ಶಶಿಧರ್ ತಿಳಿಸಿದ್ದಾರೆ.
ರೈತರ ಹಿತದೃಷ್ಟಿಯಿಂದ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಈ ಯೋಜನೆ ಅಕ್ಟೋಬರ್‌ನಿಂದಲೇ ಚಾಲನೆ ಯಲ್ಲಿದೆ, ೩೧-೦೩-೨೦೧೪ಕ್ಕೆ ಹಿಂದಿನ ವರ್ಷಗಳಲ್ಲಿ ಸಾಲ ಪಡೆದು ಸುಸ್ತಿದಾರರಾಗಿದ್ದರೆ ನಿಗದಿ ಪಡಿಸಿರುವ ದಿನಾಂಕದೊಳಗೆ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಯೋಜನೆ ಅನ್ವಯಿಸಲಿದೆ, ಆದ್ದರಿಂದ ೩೧ ಮಾಚ್ ರ್ ೨೦೧೬ರ ಒಳಗೆ ಅಸಲು ಕಟ್ಟಿ ಈ ಯೋಜನೆಯ ಪ್ರಯೋಜನ ಪಡೆದು ಬಡ್ಡಿಯಿಂದ ಮುಕ್ತಿ ಪಡೆಯಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ