ಹುಳಿಯಾರು: ನಿರಂತರ ಪರಿಶ್ರಮದಿಂದ ಅಧ್ಯಯನ ನಡೆಸಿ ಪರೀಕ್ಷೆ ಎದುರಿಸಿದರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವುದು ಸುಲಭ ಎಂದು ಹುಳಿಯಾರಿನ ಮಹಿಳಾ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಪ್ರೊ. ಹೊನ್ನಯ್ಯ ಹೇಳಿದರು.
ಪಟ್ಟಣದ ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಭಾಗ ಹಾಗೂ ಪ್ಲೇಸ್ ಮೆಂಟ್ ಸೆಲ್ ವತಿಯಿಂದ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಹೇಗೆ ತಯಾರಿ ಮಾಡಿ ಕೊಳ್ಳಬೇಕು ಎಂಬ ವಿಷಯದ ಕುರಿತು ನಡೆದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಹುಳಿಯಾರು ಬಿಎಂಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಹೇಗೆ ತಯಾರಿ ಮಾಡಿ ಕೊಳ್ಳಬೇಕು ಎಂಬ ವಿಷಯದ ಕುರಿತು ನಡೆದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಪ್ರೊ. ಹೊನ್ನಯ್ಯ ಮಾತನಾಡಿದರು.
|
ಪರೀಕ್ಷೆಗಳಲ್ಲಿ ವಿಷಯಗಳನ್ನು ಅರ್ಥಮಾಡಿಕೊಳ್ಳವುದು, ಮನನ ಮಾಡಿಕೊಳ್ಳುವುದು, ವಿಷಯಗಳನ್ನು ಆಯ್ಕೆ ಮಾಡಿಕೊಳ್ಳವುದು ಮುಖ್ಯವಾಗುತ್ತದೆ.ಐ ಎ ಎಸ್, ಕೆ ಎ ಎಸ್ ಪರೀಕ್ಷೆಗಳು ಮೂರು ಹಂತಗಳಲ್ಲಿ ನಡೆಯಲ್ಲಿದ್ದು ಒಂದು ಹಂತದಲ್ಲಿ ಯಶಸ್ವಿಯಾದರೆ ಮುಂದಿನ ಹಂತಗಳಿಗೆ ಮುನ್ನಡೆಯಲು ಸಾಧನ ಎಂದು ತಿಳಿಸಿದರು. ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ನಿರಂತರ ಪರಿಶ್ರಮ ಮತ್ತು ಆಳವಾದ ಅಧ್ಯಯನದಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಹುದು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರೋ.ಬಾಳಪ್ಪನವರು ಮಾತನಾಡಿ ಪರೀಕ್ಷಾರ್ಥಿಗಳು ವಿಷಯ ಸಂಗ್ರಹಿಸುವ ಕೌಶಲ ಬೆಳೆಸಿಕೊಂಡು ಸ್ವಂತ ಟಿಪ್ಪಣಿ ಮಾಡಿಕೊಳ್ಳುವುದರಿಂದ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಲು ಸಾಧ್ಯವಿದ್ದು ಈ ಬಗ್ಗೆ ಗಮನ ಕೊಡಬೇಕೆಂದರು.
ಕಾರ್ಯಕ್ರಮದಲ್ಲಿ ಪ್ರೊ. ಸ್ವಾಮಿ, ದೈಹಿಕ ನಿರ್ದೇಶಕ ಶಿವಯ್ಯ, ಗ್ರಂಥಪಾಲಕರಾದ ಲೋಕೇಶ್ ನಾಯ್ಕ ಭಾಗವಹಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ