ಹುಳಿಯಾರು ಗ್ರಾಮದೇವತೆ ಶ್ರೀದುರ್ಗಾಪರಮೇಶ್ವರಿ ದೇವಿಯ ೪೬ನೇ ವರ್ಷದ ವೈಭವಯುತ ಜಾತ್ರಾಮಹೋತ್ಸವ ಪ್ರಯುಕ್ತ ಶ್ರೀದೇವಿ ಮಹಾತ್ಮೆ ಕೃಪಾಪೋಷಿತಾ ನಾಟಕ ಮಂಡಳಿಯವರು ೨೮ ನೇ ವರ್ಷದ ದೇವಿ ಮಹಾತ್ಮೆ ನಾಟಕವನ್ನು ಅಭಿನಯಿಸಲಿದ್ದಾರೆ.
ಏ.೨೯ ರ ಶುಕ್ರವಾರ ರಾತ್ರಿ ೯ ಗಂಟೆಗೆ ದೇವಸ್ಥಾನದ ಮುಂಭಾಗ ದುರ್ಗಾಪರಮೇಶ್ವರಿ ಡ್ರಾಮ ಸೀನರೀಸ್ ನವರ ಭವ್ಯ ರಂಗಸಜ್ಜಿಕೆಯಲ್ಲಿ ದೇವಿ ಮಹಾತ್ಮೆ ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದ್ದು ಶಾಸಕ ಸಿ.ಬಿ.ಸುರೇಶ್ ಬಾಬು ನಾಟಕ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಧರ್ಮದರ್ಶಿ ಶಿವಕುಮಾರ್ ಉದ್ಘಾಟಿಸಲಿದ್ದು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್,ಕಾಂಗ್ರೆಸ್ ಮುಖಂಡ ಸಾಸಲು ಸತೀಶ್,ಜಿಪಂ ಸದಸ್ಯ ವೈ.ಸಿ.ಸಿದ್ದರಾಮಯ್ಯ , ತಾಪಂ ಸದಸ್ಯ ಹೆಚ್.ಎನ್.ಕುಮಾರ್,ಗ್ರಾಪಂ ಅಧ್ಯಕ್ಷೆ ಗೀತಾ ಪ್ರದೀಪ್ ಮತ್ತಿತರರು ಭಾಗವಹಿಸಲಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ