ಹುಳಿಯಾರು: ಪಟ್ಟಣದ ಬಿಹೆಚ್ ರಸ್ತೆಯ ಇಂಡೇನ್ ಗ್ಯಾಸ್ ಗೊಡೌನ್ ಮುಂಭಾಗ ನಡೆದ ಅಪಘಾತದಲ್ಲಿ ಸೈಕಲ್ ಸವಾರ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ೯ ರ ಸಮಯದಲ್ಲಿ ಜರುಗಿದೆ.ಮೃತನನ್ನು ಈಶ್ವರಯ್ಯ(೫೨)ಬಿನ್ ನಂಜಯ್ಯ ಎಂದು ಗುರ್ತಿಸಲಾಗಿದ್ದು ಈತ ಪಟ್ಟಣದ ದಿನಸಿಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ.ರಾತ್ರಿ ಕೆಲಸ ಮುಗಿಸಿಕೊಂಡು ತನ್ನ ಊರಾದ ಕಂಪನಹಳ್ಳಿಗೆ ಸೈಕಲ್ ಮೇಲೆ ತೆರಳುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಪೆಟ್ಟು ಬಿದ್ದು ಬೆಂಗಳೂರಿನ ನಿಮಾನ್ಸ್ ಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿರುತ್ತಾನೆ.ಪ್ರಕರಣ ಹುಳಿಯಾರು ಠಾಣೆಯಲ್ಲಿ ದಾಖಲಾಗಿದೆ.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ