(ಕೃಪೆ:ಚಿಕ್ಕನಾಯಕನಹಳ್ಳಿ ಸುದ್ದಿ ಬ್ಲಾಗ್)
ಯಳನಡು ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವದ ಸಿದ್ದತೆ ಬಗ್ಗೆ ಪೂರ್ವಭಾವಿಯಾಗಿ ಚಿಕ್ಕನಾಯಕನಹಳ್ಳಿ ಯಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ ಹನ್ನೆರಡು ವರ್ಷಗಳ ನಂತರ ನಡೆಯಲಿರುವ ಯಳನಡು ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಜನರ ಸೇರುತ್ತಾರೆ ಹಾಗೂ ಮುಖ್ಯ ಮಂತ್ರಿ ಬರುವ ನಿರೀಕ್ಷೆಯಿದ್ದು ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಮುಂತಾದವುಗಳನ್ನು ಸಮರ್ಪಕವಾಗಿ ನಿಭಾಯಿಸುವಂತೆ ಸೂಚಿಸಿದರು.
ಸಂಸದ ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ಯಳನಡು ದೇವಸ್ಥಾನ ಬಳಿ ಹೈಮಾಸ್ಟ್ ದೀಪ ಅಳವಡಿಸುವಂತೆ ಹಾಗೂ ಜಾತ್ರೆಗೆ ಬರುವ ಭಕ್ತಾಧಿಗಳಿಗೆ ವಿದ್ಯುತ್ ಸಮಸ್ಯೆಯಾಗದಂತೆ, ನೀರಿನ ಸಮಸ್ಯೆ ಉಲ್ಭಣಿಸದಂತೆ ಅಧಿಕಾರಿಗಳು ಕ್ರಮ ವಹಿಸುವಂತೆ ತಿಳಿಸಿದರು.
ಶಾಸಕ ಸಿ.ಬಿ.ಸುರೇಶ್ ಬಾಬು ಮಾತನಾಡಿ, ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.
ತಹಶೀಲ್ದಾರ್ ಗಂಗೇಶ್ , ಜಿ.ಪಂ.ಸದಸ್ಯ ವೈ.ಸಿ.ಸಿದ್ದರಾಮಯ್ಯ ಮಾತನಾಡಿ, ಸಭೆಯಲ್ಲಿ ಜಿ.ಪಂ.ಸದಸ್ಯರಾದ ಕಲ್ಲೇಶ್, ನಾರಾಯಣ್, ಮಾಜಿ ಶಾಸಕ ಬಿ.ಲಕ್ಕಪ್ಪ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ