ಹುಳಿಯಾರು:ಸಮೀಪದ ನಂದಿಹಳ್ಳಿಯ ನಂದಿಬಸವೇಶ್ವರ ಸ್ವಾಮಿಯವರ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ನಂದಿಬಸವೇಶ್ವರ ಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿಯಿಂದ ಶುಕ್ರವಾರ ರಾತ್ರಿ ರಾಜಾ ಸತ್ಯವ್ರತ ಅಥವಾ ಶನಿಪ್ರಭಾವ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ.ಶ್ರೀ ಶನೇಶ್ವರ ಡ್ರಾಮಾ ಸೀನರೀಸ್ ನವರ ಅಲಂಕೃತ ಭವ್ಯ ರಂಗ ಸಜ್ಜಿಕೆಯಲ್ಲಿ ರಾಜಣ್ಣನವರ ಸಂಗೀತ ನಿರ್ದೇಶನದಲ್ಲಿ ನಡೆಯಲಿರುವ ನಾಟಕ ಸಮಾರಂಭದ ಅಧ್ಯಕ್ಷತೆಯನ್ನು ತಿರುಮಲಾಪುರ ಗ್ರಾಮಪಂಚಾಯ್ತಿ ಅಧ್ಯಕ್ಷ ದೇವರಾಜು ವಹಿಸಲಿದ್ದು ಶಾಸಕ ಸಿ.ಬಿ.ಸುರೇಶ್ ಬಾಬು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರುಗಳಾದ ಕಿರಣ್ ಕುಮಾರ್ ಮತ್ತು ಜೆ.ಸಿ.ಮಧುಸ್ವಾಮಿ, ಕಾಂಗ್ರೆಸ್ ಮುಖಂಡ ಸಾಸಲು ಸತೀಶ್,ಜಿಪಂ ಸದಸ್ಯ ಸಿದ್ದರಾಮಯ್ಯ,ತಾಪಂ ಸದಸ್ಯೆ ಕಲ್ಯಾಣಿಭಾಯಿ ರಘುನಾಯ್ಕ,ಗ್ರಾಪಂ ಉಪಾಧ್ಯಕ್ಷ ಮೋಹನ್ ಕುಮಾರ್ ,ನಂದಿಹಳ್ಳಿ ಶಿವಣ್ಣ ಸೇರಿದಂತೆ ಗ್ರಾಮಪಂಚಾಯ್ತಿ ಸದಸ್ಯರುಗಳು,ಗ್ರಾಮದ ಪ್ರಮುಖರು ಭಾಗವಹಿಸಲಿದ್ದಾರೆ.ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ನಾಟಕಮಂಡಳಿಯವರು ಕೋರಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ