ಹುಳಿಯಾರು: ಸಮೀಪದ ಕೆಂಕೆರೆಯ ಎಂಜಿ ಪಾಳ್ಯದಲ್ಲಿ ಶ್ರೀ ಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಪ್ರಾರಂಭೋತ್ಸವ ಶುಕ್ರವಾರದಂದು ಷಡಸ್ಥಳದ ಧ್ವಜಾರೋಹಣದೊಂದಿಗೆ ಚಾಲನೆಗೊಂಡಿದ್ದು ಮೇ.೧೪ ಹಾಗೂ ೧೫ ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ.
ಶನಿವಾರದಂದು ಸಂಜೆ ಕೆಂಕೆರೆಯ ಗ್ರಾಮದೇವತೆಗಳಾದ ಶ್ರೀ ಚನ್ನಬಸವೇಶ್ವರ ಸ್ವಾಮಿ ಹಾಗೂ ಕಾಳಮ್ಮನವರ ಆಗಮನ,ಪುಣ್ಯಾಹ,ಗಣಹೋಮ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ.
ಭಾನುವಾರದಂದು ಕುಪ್ಪೂರು ಗದ್ದಿಗೆ ಮಠದ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳ ಅಮೃತಹಸ್ತದಿಂದ ನೂತನ ಆಲಯದ ಗೋಪುರದ ಕಳಸ ಸ್ಥಾಪನೆ ಹಾಗೂ ತತ್ಸಂಬಂಧ ಧಾರ್ಮಿಕ ಕಾರ್ಯಗಳು ನಡೆಯಲಿದೆ.
ಮಧ್ಯಾಹ್ನ ೧೨ ಗಂಟೆಗೆ ಶ್ರೀ ಶೈಲಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಜನಜಾಗೃತಿ ಭಾವೈಕ್ಯ ಧರ್ಮ ಸಮಾರಂಭ ನಡೆಯಲಿದೆ.ಕರಿಸಿದ್ದೇಶ್ವರ ಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮಿಗಳು,ಕೆ.ಬಿದರೆ ದೊಡ್ಡಮಠದ ಪ್ರಭುಕುಮಾರ ಶಿವಾಚಾರ್ಯ ಸ್ವಾಮಿಗಳು, ಚನ್ನಗಿರಿ ತಾಲ್ಲೂಕ್ ತಾವರೆಕೆರೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು,ಮಾದಿಹಳ್ಳಿ ಹಿರೇಮಠದ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು, ಬೆಲಗೂರಿನ ಶ್ರೀ ಬಿಂಧುಮಾಧವ ಸ್ವಾಮಿಗಳ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಸಿ.ಬಿ.ಸುರೇಶ್ ಬಾಬು ವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಉದ್ಘಾಟಿಸಲಿದ್ದಾರೆ.ಸಂಸದ ಮುದ್ದ ಹನುಮೇಗೌಡ ನಾಮಫಲಕ ಅನಾವರಣ ಮಾಡಲಿದ್ದು ವಿಧಾನ ಪರಿಷತ್ ಪ್ರತಿಪಕ್ಷದನಾಯಕ ಕೆ.ಎಸ್.ಈಶ್ವರಪ್ಪನವರು "ಚಿಂತನ" ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ವೀರಗಾಸೆ,ಲಿಂಗದಬೀರರು,ನಾದಸ್ವರ ಹಾಗೂ ಸಂಗೀತ ಕಾಯಕ್ರಮವಿದ್ದು ಭಕ್ತಾಧಿಗಳಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ