ಹುಳಿಯಾರು ಸಮೀಪದ ವಳಗೆರೆಹಳ್ಳಿಯ ಶ್ರೀ ಶನೇಶ್ವರ ಸ್ವಾಮಿಯವರ ೨೦ ನೇ ವರ್ಷದ ಕುಂಭಾಭಿಷೇಕ ಮಹೋತ್ಸವದ ಅಂಗವಾಗಿ ಮೇ.೧೪ ರ ಶನಿವಾರ ಬೆಳಿಗ್ಗೆ ೭.೪೫ ಕ್ಕೆ ಪುಣ್ಯಾಹ, ದೇವನಾಂದಿ, ನವಗ್ರಹ ಹೋಮ,ಶನೈಶ್ವರ ಹೋಮ,ಮೃತ್ಯುಂಜಯ ಹೋಮ, ಪಂಚಾಮೃತ ಅಭಿಷೇಕ ಮತ್ತು ಸಹಸ್ರನಾಮ ಅರ್ಚನೆ ನಡೆಯಲಿದೆ. ಮ.೧೨.೪೫ ಕ್ಕೆ ಶನೇಶ್ವರ ಸ್ವಾಮಿಗೆ ಕುಂಭಾಭಿಷೇಕ ನಡೆದು ಮಧ್ಯಾಹ್ನ ೧.೩೦ ಕ್ಕೆ ಅನ್ನಸಂತರ್ಪಣೆ. ರಾತ್ರಿ ೧೦ ಕ್ಕೆ ಊರಿನ ಗ್ರಾಮಸ್ಥರಿಂದ ಶನಿಪ್ರಭಾವ ಪೌರಣಿಕ ನಾಟಕ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಲಾಗಿದೆ.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ