ಹುಳಿಯಾರು ಪಟ್ಟಣದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಉದ್ಘಾಟನೆ ಹಾಗೂ ಕೆಂಪೇಗೌಡ ಜಯಂತಿಯನ್ನು ಜೂ.25ರ ಶನಿವಾರದಂದು ಅಂಬೇಡ್ಕರ್ ಭವನದಲ್ಲಿ ಬೆ.೧೧ ಕ್ಕೆ ಹಮ್ಮಿಕೊಳ್ಳಲಾಗಿದೆ.ಪಟ್ಟನಾಯಕನಹಳ್ಳಿಯ ನಂಜಾವಧೂತ ಸ್ವಾಮೀಜಿಯ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕ್ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಪರಮೇಶ್ವರಪ್ಪ ವಹಿಸಲಿದ್ದಾರೆ.
ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಶ್ರೀನಿವಾಸಮೂರ್ತಿ,ರಾಜಣ್ಣ,ಒಕ್ಕಲಿಗರ ನೌಕರರ ವೇದಿಕೆಯ ಅಧ್ಯಕ್ಷ ಪ್ರಕಾಶ್,ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಂಗಯ್ಯ,ಜಿಪಂ ಸದಸ್ಯರುಗಳಾದ ಮಂಜುಳಮ್ಮ,ರಾಮಚಂದ್ರಯ್ಯ ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಸಹಕಾರ ಸಂಘದ ಗೌರವಾಧ್ಯಕ್ಷ ಸೀತಾರಾಮಯ್ಯ ಮನವಿ ಮಾಡಿದ್ದಾರೆ.
ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಸಹಕಾರ ಸಂಘದ ಗೌರವಾಧ್ಯಕ್ಷ ಸೀತಾರಾಮಯ್ಯ ಮನವಿ ಮಾಡಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ