ಮೆರವಣಿಗೆ ಮೂಲಕ ಸರ್ಕಾರಕ್ಕೆ ಮನವಿ
------
ಮಹದಾಯಿ ತೀರ್ಪು ಖಂಡಿಸಿ ಹುಳಿಯಾರಿನಲ್ಲಿ ಜಿಲ್ಲಾ ರೈತಸಂಘದ ಅಧ್ಯಕ್ಷ ಹೊಸಳ್ಳಿ ಚಂದ್ರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಉತ್ತರ ಕರ್ನಾಟಕ ಜನತೆಗೆ ಕುಡಿಯುವ ನೀರು ಪೂರೈಕೆ ಮಾಡಲು 7.56 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ಮಹದಾಯಿ ನ್ಯಾಯಮಂಡಳಿ ಬುಧವಾರ ತಿರಸ್ಕರಿಸಿರುವುದು ರಾಜ್ಯದ ಪಾಲಿಗೆ ನೇಣುಕುಣಿಕೆಯಾಗಿ ಪರಿಣಮಿಸಿದೆ ಎಂದು ಜಿಲ್ಲಾ ರೈತಸಂಘದ ಅಧ್ಯಕ್ಷ ಹೊಸಳ್ಳಿ ಚಂದ್ರಪ್ಪ ಹರಿಹಾಯ್ದರು.
ಪಟ್ಟಣದ ಕಛೇರಿಯಿಂದ ನಾಡಕಚೇರಿಯವರೆಗೆ ಮೆರವಣಿಗೆಯಲ್ಲಿ ಸಾಗಿ ಉಪತಹಸಿಲ್ದಾರ್ ಸತ್ಯನಾರಾಯಣ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಮಹದಾಯಿ ತೀರ್ಪಿನಿ೦ದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು.ಇಲ್ಲದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ತಾಲ್ಲೂಕ್ ಮಹಿಳಾ ಘಟಕದ ಗೌರವಾಧ್ಯಕ್ಷೆ ಇಂದಿರಾ ರಾಜಶೇಕರ್,ತಾಲ್ಲೂಕ್ ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ,ಹೋಬಳಿ ಘಟಕದ ಅಧ್ಯಕ್ಷೆ ಕರಿಯಮ್ಮ,ಶೆಟ್ಟಿಕೆರೆ ಸಂಘದ ಅಧ್ಯಕ್ಷರಾದ ಶಂಕರಯ್ಯ,ಕರಿಯಪ್ಪ,ಸೋಮಜ್ಜನಪಾಳ್ಯದ ಬೀರಲಿಂಗಪ್ಪ,ಗೋಪಿನಾಯ್ಕ ಮುಂತಾದವರಿದ್ದರು.
![]() |
ಉಪತಹಸಿಲ್ದಾರ್ ಸತ್ಯನಾರಾಯಣ ಅವರಿಗೆ ಮನವಿ ಸಲ್ಲಿಸಿದ ಕ್ಷಣ |
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ