ಹುಳಿಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಾಣಧಾಳು ಕ್ಷೇತ್ರ ವ್ಯಾಪ್ತಿಯ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟಗಳ ಪದಗ್ರಹಣ ಸಮಾರಂಭವು ಜುಲೈ ೯ ರ ಶನಿವಾರದಂದು ಬೆ.೧೧ ಕ್ಕೆ ಯಗಚೀಹಳ್ಳಿಯ ಸರ್ಕಾರಿ ಹಿರಿಯ ಪ್ರಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು ಕುಂಚಟಿಗರ ಮಹಾಸಂಸ್ಥಾನ ಮಠದ ಎಲೆರಾಂಪುರದ ಶ್ರೀ ಹನುಮಂತನಾಥ ಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ.ಗಾಣಧಾಳು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸರಸ್ವತಿ ಬಾಯಿ ಅಧ್ಯಕ್ಷತೆ ವಹಿಸಲಿದ್ದು ಶಾಸಕ ಸಿ.ಬಿ.ಸುರೇಶ್ ಬಾಬು,ಶಿರಾ ತಾಲ್ಲೂಕಿನ ಗ್ರಾ.ಯೋ.ಯೋಜನಾಧಿಕಾರಿ ಉಮಾ,ಜಿಪಂ ಸದಸ್ಯ ಎಸ್.ಟಿ.ಮಹಾಲಿಂಗಯ್ಯ,ಕೆಂಕೆರೆ ಕ್ಷೇತ್ರದ ತಾಪಂ ಸದಸ್ಯೆ ಭಾಗ್ಯಮ್ಮ,ಗಾಣಧಾಳು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ನೀಲಕಂಠಪ್ಪ ಸೇರಿದಂತೆ ಗಾಣಧಾಳು ಕ್ಷೇತ್ರ ವ್ಯಾಪ್ತಿಯ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟಗಳ ಅಧ್ಯಕ್ಷರುಗಳ ಭಾಗವಹಿಸಲಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ