ಧರ್ಮಸ್ಥಳ ಒಕ್ಕೂಟಗಳ ಪದಗ್ರಹಣ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಕಿವಿಮಾತು
-----------------
ಹುಳಿಯಾರು:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದು,ಆರ್ಥಿಕ ಸಬಲತೆಯಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಕುಟುಂಬ ನಿರ್ವಹಣೆ ಸಲೀಸಾಗಿದ್ದು ಸಾಮಾಜಿಕ ಪರಿವರ್ತನೆಗೆ ಕಾರಣವಾಗಿದೆ. ಸ್ವಸಸಹಾಯ ಸಂಘಗಳ ಸ್ಥಾಪನೆಯಿಂದಾಗಿ ಅಪ್ಪ ಹಾಕಿದ ಆಲದ ಮರವೆಂದು ಕೇವಲ ಸಂಸಾರ ನಿರ್ವಹಣೆಗೆ ಮಾತ್ರ ಸೀಮಿತವಾಗದ ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಬೆಳೆದಿದ್ದು , ಒಕ್ಕೂಟದ ಸದಸ್ಯರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸದರೆ ಮತ್ತಷ್ಟು ಪ್ರಗತಿ ಹೊಂದಿ ಇಡೀ ಸಮುದಾಯಕ್ಕೆ ಮಾರ್ಗದರ್ಶನ ನೀಡಲು ಸಾಧ್ಯವಾಗಲಿದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಕಿವಿಮಾತು ಹೇಳಿದರು.
![]() |
ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ |
ಅವರು ಯಗಚೀಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರದಂದು ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಾಣಧಾಳು ಕ್ಷೇತ್ರ ವ್ಯಾಪ್ತಿಯ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಪುರುಷರಿಗಾಗಿ ವಿವಿಧ ಮಂಡಲಿ ನಿಗಮಗಳ ಮೂಲಕ ಹತ್ತು ಹಲವಾರು ಯೋಜನೆಗಳನ್ನು ಹಮ್ಮಿಕೊಂಡು ತರಬೇತಿ ಹಾಗೂ ಸಾಲ ನೀಡಿದರೂ ಸಹ ಸಾಲ ಪಡೆದವರು ಮರುಪಾವತಿ ಮಾಡಲಾಗದೆ ವಿಫಲರಾಗುತ್ತಿದ್ದನ್ನು ಅರಿತು ಸ್ತ್ರೀಶಕ್ತಿ ಸಂಘಗಳನ್ನು ಸ್ಥಾಪಿಸಿ ಆ ಮೂಲಕ ಸುತ್ತು ನಿಧಿ ಯೋಜನೆಯಡಿ ನೀಡಲಾದ ಸಾಲದಿಂದಾಗಿ ಮಹಿಳೆಯರು ಪ್ರಯೋಜನ ಹೊಂದಿದ್ದು ಇದೀಗ ಯಶೋಗಾಥೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಮಹಿಳೆಯರ ಸ್ವಾವಲಂಬಿ ಜೀವನ ನಡೆಸಲು ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವನಿಟ್ಟಿನಲ್ಲಿ ಅನುಕೂಲ ಕಲ್ಪಿಸಿದ್ದು ಅವರ ಮಾರ್ಗದರ್ಶನದಲ್ಲಿ ಪರಸ್ಪರ ಹೊಂದಾಣಿಕೆ ಮೂಲಕ ಮುಂದುವರಿದು ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಎಂದು ಸಲಹೆ ನೀಡಿದರು.
ಕುಂಚಟಿಗರ ಮಹಾಸಂಸ್ಥಾನ ಮಠದ ಎಲೆರಾಂಪುರದ ಶ್ರೀ ಹನುಮಂತನಾಥ ಸ್ವಾಮಿಗಳು ಆಶೀರ್ವಚನ ನೀಡಿದರು.ಜಿಪಂ ಸದಸ್ಯ ಎಸ್.ಟಿ.ಮಹಾಲಿಂಗಯ್ಯ ಹಾಗೂ ಗಾಣಧಾಳು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ನೀಲಕಂಠಪ್ಪ ಮಾತನಾಡಿದರು.
ಇದಕ್ಕೂ ಮುನ್ನ ಶ್ರೀಗಳನ್ನು ಹಾಗೂ ಜಿಲ್ಲಾಧಿಕಾರಿಗಳನ್ನು ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಕರೆತರಲಾಯಿತು.
![]() |
ಹುಳಿಯಾರು ಸಮೀಪದ ಯಗಚೀಹಳ್ಳಿಯಲ್ಲಿ ಶನಿವಾರದಂದು ನಡೆದ ಗಾಣಧಾಳು ಕ್ಷೇತ್ರ ವ್ಯಾಪ್ತಿಯ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟಗಳ ಪದಗ್ರಹಣ ಸಮಾರಂಭವನ್ನು ಚಿತ್ರದುರ್ಗ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯಉದ್ಘಾಟಿಸಿದರು.ಎಲೆರಾಂಪುರದ ಶ್ರೀ ಹನುಮಂತನಾಥ ಸ್ವಾಮಿಗಳು , ಜಿಪಂ ಸದಸ್ಯ ಎಸ್.ಟಿ.ಮಹಾಲಿಂಗಯ್ಯ,ಗಾಣಧಾಳು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ನೀಲಕಂಠಪ್ಪ ,ಉಮಾ ಮೊದಲಾದವರಿದ್ದರು.
|
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ