೨೦೧೬-೧೭ನೇ ಸಾಲಿನಲ್ಲಿ ಸರ್ವ ಶಿಕ್ಷಣ ಅಭಿಯಾನ ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ೧-೯ನೇ ತರಗತಿಯ ಅಂಗವಿಕಲ ಮಕ್ಕಳಿಗೆ ಆ.೧೬ರ ಬೆಳಗ್ಗೆ ೯.೩೦ಕ್ಕೆ ವೈದ್ಯಕೀಯ ಮೌಲ್ಯಂಕನ ಶಿಬಿರ ಏರ್ಪಡಿಸಲಾಗಿದೆ.
ಚಿಕ್ಕನಾಯಕನಹಳ್ಳಿ ಪಟ್ಟಣದ ಬಿಆರ್‌ಸಿ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಳೆದ ಸಾಲಿನಲ್ಲಿ ವೈದ್ಯಕೀಯ ಮೌಲ್ಯಂಕನ ಶಿಬಿರಕ್ಕೆ ಹಾಜರಾದ ಮಕ್ಕಳನ್ನು ಹೊರತುಪಡಿಸಿ ಉಳಿದ ಮಕ್ಕಳು ಶಿಬಿರಕ್ಕೆ ಬರುವಾಗ ವೈದ್ಯಕೀಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಶಾಲಾ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರದ ನಕಲು ಹಾಗೂ ಮಗುವಿನ ೩ ಭಾವಚಿತ್ರವನ್ನು ತಪ್ಪದೇ ತರಲು ಬಿಇಒ ಕೃಷ್ಣಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ