ಹುಳಿಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹುಳಿಯಾರು ವಲಯದ ಒಕ್ಕೂಟ ಪದಗ್ರಹಣ ಸಮಾರಂಭವನ್ನು ಹುಳಿಯಾರು ಸಮೀಪದ ತಿರುಮಲಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಸೋಮವಾರದಂದು ಹಮ್ಮಿಕೊಳ್ಳಲಾಗಿದೆ.
ತಿರುಮಲಾಪುರ ಗ್ರಾಮಪಂಚಾಯ್ತಿ ಅಧ್ಯಕ್ಷ ಎನ್.ಬಿ.ದೇವರಾಜು ಅಧ್ಯಕ್ಷತೆ ವಹಿಸಲಿದ್ದು ಜಿಲ್ಲಾಪಂಚಾಯ್ತಿ ಸದಸ್ಯ ವೈ.ಸಿ.ಸಿದ್ಧರಾಮಯ್ಯ ಉದ್ಘಾಟಿಸಲಿದ್ದಾರೆ.ಹುಳಿಯಾರು ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿ ಬಿ.ಕೆ.ಗೀತಕ್ಕ ಉಪಸ್ಥಿತಿಯಲ್ಲಿ ಯೋಜನೆಯ ತುಮಕೂರು ಉತ್ತರ ವಿಭಾಗದ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ,ತಾಲ್ಲೂಕ್ ಪಂಚಾಯ್ತಿ ಸದಸ್ಯೆ ಕಲ್ಯಾಣಿ ಬಾಯಿ,ಶಾಲಾ ಮುಖ್ಯ ಶಿಕ್ಷಕ ಎನ್.ಪಿ.ಚಂದ್ರಶೇಖರ್, ಜಿಲ್ಲಾ ರೈತಸಂಘದ ಅಧ್ಯಕ್ಷ ಹೊಸಳ್ಳಿ ಚಂದ್ರಪ್ಪ,ಗ್ರಾಪಂ ಉಪಾಧ್ಯಕ್ಷ ಮೋಹನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ