ಹುಳಿಯಾರು: ಕ್ಷೇತ್ರ ಶಿಕ್ಷಣಾಧಿಕಾರಿಗಳವರ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ,ತಾಲ್ಲೂಕು ಪ್ರೌಢಶಾಲಾ ಕನ್ನಡ ಭಾಷಾ ಬೋಧಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಆ.೨೩ ರ ಮಂಗಳವಾರದಂದು ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಭಾಷಾ ಬೋಧಕರ ಪುನಶ್ಚೇತನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೧೦. ೩೦ ರಿಂದ ೧.೩೦ ರವರೆಗೆ ಕನ್ನಡ ಭಾಷಾ ಬೋಧನೆಯಲ್ಲಿ ಸಿಸಿಇ ಅಳವಡಿಕೆ ಕುರಿತು ಸಂಪನ್ಮೂಲ ವ್ಯಕ್ತಿ ಸಾಸಲು ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಜಿ.ಸಂತೋಷ್ ಮಾಹಿತಿ ನೀಡುವರು.ಮಧ್ಯಾಹ್ನ ೨.೩೦ ರಿಂದ ೪.೩೦ ವರೆಗೆ ೮.೯ ನೇತರಗತಿಯ ಪ್ರಶ್ನೆಪತ್ರಿಕೆ ವಿಶ್ಲೇಷಣೆಯನ್ನು ಸಂಪನ್ಮೂಲ ವ್ಯಕ್ತಿಯಾದ ಬರಕನಹಾಲು ವಿಶ್ವಭಾರತಿ ಪ್ರೌಢಶಾಲೆಯ ಕನ್ನಡ ಶಿಕ್ಷಕ ಕೆ.ವೀರಣ್ಣ ಮಾಡುವರು.
ಕಾರ್ಯಾಗಾರಕ್ಕೆವಿಷಯಪರಿವೀಕ್ಷಕ ರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಆಗಮಿಸಲಿದ್ದು ತಾಲ್ಲೂಕಿನ ಎಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಬೋಧಕರು ತಪ್ಪದೇ ಕಾರ್ಯಾಗಾರಕ್ಕೆ ಕಡ್ಡಾಯವಾಗಿ ಹಾಜರಾಗಬೇಕೆಂದು ಹಾಗೂ ಶಿಕ್ಷಕರು ಕಾರ್ಯಗಾರಕ್ಕೆ ಆಗಮಿಸುವಾಗ ೮, ೯, ೧೦ ನೇ ತರಗತಿಯ ಕನ್ನಡ ಪಠ್ಯ ಪುಸ್ತಕವನ್ನು ತರಬೇಕಾಗಿ ಸೂಚಿಸಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ