ಚಿಕ್ಕನಾಯಕನಹಳ್ಳಿಯಲ್ಲಿನ ಕನ್ನಡ ಸಂಘದ ವೇದಿಕೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಸೆ.15 ರ ಗುರುವಾರದಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರ ೧೨೯ನೇ ಜನ್ಮದಿನ ಹಾಗೂ ಶಿಕ್ಷಕರ ಸನ್ಮಾನವನ್ನು ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು ಶಾಸಕ ಸಿ.ಬಿ.ಸುರೇಶ್‌ಬಾಬು ಅಧ್ಯಕ್ಷತೆ ವಹಿಸುವರು.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಧ್ವಜರೋಹಣ ನೆರವೇರಿಸುವರು.
ಸಂಸದ ಎಸ್ .ಪಿ.ಮುದ್ದಹನುಮೇಗೌಡ ಡಾ.ರಾಧಾಕೃಷ್ಣನ್ ಭಾವಚಿತ್ರ ಅನಾವರಣ ಮಾಡುವರು.
ಜಿ.ಪಂ. ಅಧ್ಯಕ್ಷೆ ಲತಾ ರವಿಕುಮಾರ್ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸುವರು.
ಜಿ.ಪಂ. ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡುವರು
.
ತುಮಕೂರು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್ ಶಿಕ್ಷಕರ ಕ್ರೀಡಾಕೂಟದಲ್ಲಿ ವಿಜೇತ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡುವರು.
ಬೆಂಗಳೂರಿನ ಇಸ್ರೋ ಹಿರಿಯ ವಿಜ್ಞಾನಿ ಎಚ್. ಎನ್.ಸುರೇಶ್‌ಕುಮಾರ್ ಮಾತನಾಡುವರು.
ತಾಪಂ ಅಧ್ಯಕ್ಷೆ ಹೊನ್ನಮ್ಮ ಶೇಷಯ್ಯ ಶಿಕ್ಷಕ ದಿನಾಚರಣೆ ಸಮಿತಿಯಿಂದ ಆಯ್ಕೆಯಾದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡುವರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ