ಹುಳಿಯಾರು:ಕರ್ನಾಟಕ ನೀರಾವರಿ ನಿಗಮ ನಿಯಮಿತದವರು ಭದ್ರಾ ಮೇಲ್ದಂಡೆ ಏತ ನೀರಾವರಿ ಯೋಜನೆ ಹಂತ-೨ ರಲ್ಲಿ ನೀರಾವರಿ ಯೋಜನೆ ಕೈಗೆತ್ತಿಕೊಂಡಿದ್ದು , ಈ ಯೋಜನೆಯ ಕುರಿತಂತೆ ತುಮಕೂರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ಅ.೧೯ರ ಬುಧವಾರ ಬೆಳಿಗ್ಗೆ ೧೧ಕ್ಕೆ ಸಾರ್ವಜನಿಕ ಪರಿಸರ ಸಭೆಯನ್ನು ಕರೆಯಲಾಗಿದೆ.
ಭದ್ರಾ ಮೇಲ್ದಂಡೆ ಏತ ನೀರಾವರಿ ಯೋಜನೆ ಹಂತ-೨ ರಲ್ಲಿ ದಾವಣಗೆರೆ ಹಾಗೂ ತುಮಕೂರು ಜಿಲ್ಲಾ ಭಾಗದ ರೈತರಿಗೆ ನೀರಾವರಿ ಯೋಜನೆಯ ಲಾಭ ದೊರೆಯಲಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಪರಿಸರ ಆಘಾತ ಅಧ್ಯಯನ ಅಧಿಸೂಚನೆಯಂತೆ ಯೋಜನೆಯಿಂದ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲಾ ಎಂಬ ವರದಿ ಸಲ್ಲಿಸುವ ಉದ್ದೇಶದಿಂದ ಈ ಸಭೆ ಕರೆಯಲಾಗಿದೆ.ಯೋಜನೆಯ ಬಗ್ಗೆ ಸಾರ್ವಜನಿಕ ಆಕ್ಷೇಪಣೆಗಳನ್ನು ಆಲಿಸಲಾಗುವುದು ಹಾಗೂ ಸಂಬಂಧಪಟ್ಟ ತಜ್ಞರಿಂದ ಸಮಸ್ಯೆಗೆ ಪರಿಹಾರದ ಜೊತೆಗೆ ಯೋಜನೆಯ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುವುದು.
ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಪರಿಸರ ತಜ್ಞರು ಉಪಸ್ಥಿತರಿರುವರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ