ಹುಳಿಯಾರು: ಕಾರ್ತಿಕಮಾಸದ ಕಡೆ ಸೋಮವಾರದ ಪ್ರಯುಕ್ತ ಹುಳಿಯಾರಿನ ಈಶ್ವರ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವ ವೈಭವದಿಂದ ಜರುಗಿತು.
ಮುಂಜಾನೆ ಸ್ವಾಮಿಗೆ ರುದ್ರಾಭಿಷೇಕ, ಮಹಾಮಂಗಳಾರತಿ ನಡೆಯಿತು. ಈಶ್ವರ ಲಿಂಗಕ್ಕೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು.ಕೆಂಚಮ್ಮದೇವಿಯನ್ನು ಕರೆತರಲಾಗಿತ್ತು ದೇವಾಲಯ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು.
ಸಂಜೆ ಈಶ್ವರ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ದೇವಾಲಯದಲ್ಲಿ ದೀಪ ಬೆಳಗಿಸಿ ಪೂಜೆ ಸಲ್ಲಿಸಿದರು. ಆಗಮಿಸಿದ ಭಕ್ತಾಧಿಗಳಿಗೆ ದೇವಾಲಯ ಸಮಿತಿಯಿಂದ ಅನ್ನಸಂರ್ತಪಣೆ ನಡೆಯಿತು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ