ಹುಳಿಯಾರು:ಸಮೀಪದ ಪುಣ್ಯಕ್ಷೇತ್ರವಾಗಿ ಹೆಸರಾಗಿರುವ ಲಕ್ಷ್ಮೀನರಸಿಂಹ ಸ್ವಾಮಿ ನೆಲಸಿರುವ ಹಂದನಕೆರೆ ಹೋಬಳಿಯ ಬರಗೇಹಳ್ಳಿ ಬೆಟ್ಟದಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ೨೪ ಲಕ್ಷ ರೂ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ದೇವಾಲಯ ಸಮಿತಿಯವರು ಮುಂದಾಗಿದ್ದು ನ.೬ ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಶಿಲಾನ್ಯಾಸ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಬೆಲಗೂರಿನ ಅವಧೂತರಾದ ಶ್ರೀ ಬಿಂಧುಮಾಧವ ಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಶಿಲಾನ್ಯಾಸ ನೆರವೇರಿಸಲಿದ್ದಾರೆ.ಶಾಸಕ ಸಿ.ಬಿ.ಸುರೇಶ್ ಬಾಬು ,ಮಾಜಿ ಶಾಸಕರುಗಳಾದ ಜೆ.ಸಿ.ಮಾಧುಸ್ವಾಮಿ,ಕೆ.ಎಸ್.ಕಿರಣ್ ಕುಮಾರ್,ಜಿಪಂ ಸದಸ್ಯ ವೈ.ಸಿ.ಸಿದ್ಧರಾಮಯ್ಯ,ತಹಸೀಲ್ದಾರ್ ಗಂಗೇಶ್,ತಾಪಂ ಸದಸ್ಯ ಯತೀಶ್ ,ಕೋರಗೆರೆ ಗ್ರಾಪಂ ಅಧ್ಯಕ್ಷರಾದ ಕೆ.ಎಂ.ಮಂಜುನಾಥ್ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ