ಹುಳಿಯಾರು ಹೋಬಳಿಯ ರಂಗನಕೆರೆ ಬೆಟ್ಟದಲ್ಲಿನ ಶ್ರೀಗುಡ್ಡದರಂಗನಾಥಸ್ವಾಮಿಯ ಜಾತ್ರಾ ಮಹೋತ್ಸವವು ಡಿಸೆಂಬರ್ ೧೮ ರಂದು ದೇವಾಲಯದ ಆವರಣದಲ್ಲಿ ನಡೆಯಲಿದೆ.
ಇದರ ಅಂಗವಾಗಿ ಬೆಳಿಗ್ಗೆ ೮ ಗಂಟೆಯಿಂದ ಮಹಾಗಣಪತಿ ಪೂಜೆ, ಗಂಗಾಪೂಜೆ, ಸ್ವಸ್ತಿವಾಚನ, ದೇವನಾಂದಿ, ಋತ್ವಿಗ್‌ವರುಣ, ಕಳಸಸ್ಥಾಪನೆ, ಗಣಪತಿ ಹೋಮ, ನವಗ್ರಹ ಹೋಮ, ಪುರುಷಸೂಕ್ತಹೋಮ, ಸ್ವಾಮಿಗೆ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಂತರ ಮಧ್ಯಾಹ್ನ ೧.೩೦.ರಿಂದ ಅನ್ನಸಂತರ್ಪಣೆ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಸಮಿತಿಯವರು ಮನವಿ ಮಾಡಿದ್ದಾರೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ